ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ರಾತ್ರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಪೊಲೀಸರು ನಗರ ಪರ್ಯಟನೆ ಕೈಗೊಂಡಿದ್ದರು. ಆಯಾಕಟ್ಟಿನ ಸ್ಥಳಗಳಲ್ಲಿ ನಾಕಾಬಂಧಿ ಹಾಕಿ ವಾಹನಗಳ ತಪಾಸಣೆ ನಡೆಸಲಾಯಿತು. ವಿವಿಧ ತಂಡಗಳಾಗಿ , ಪೊಲೀಸರು ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ವಿಶೇಷವಾಗಿತ್ತು. ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಗಾಂಧಿ ನಗರದಲ್ಲಿರುವ ನಿರ್ಭಯಾ ಸಖಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಂಗಳೂರಿನ ಜನರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲು ಹಾಗೂ ಧೈರ್ಯ ತುಂಬಿಸಲು ಈ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಮಾದಕ ವಸ್ತುಗಳ ಸಾಗಣೆ ಮಾಡುವವರು ಕಾನೂನು ಉಲ್ಲಂಘನೆ ಮಾಡುವವರು , ರೌಡಿ ಚಟುವಟಿಕೆಗಳನ್ನು ನಡೆಸುವವರಿಗೆ ಪೊಲೀಸರು ಕಡಿವಾಣ ಹಾಕಲಿದ್ದಾರೆ ಎಂದು ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…