ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

May 31, 2025
12:05 AM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಹೇಳಿದ್ದಾರೆ.

ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್‌ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದರು. ಅಕ್ರಮ ಗೋಹತ್ಯೆ ಮತ್ತು ಸಾಗಾಟ, ಮಾದಕ ಪದಾರ್ಥಗಳ ಸಾಗಾಟ ಅಥವಾ ಮಾರಾಟ, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಾ.ಅರುಣ್ ಎಚ್ಚರಿಸಿದರು. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯ ಬೆನ್ನಲ್ಲೇ ರಾಜ್ಯ ಸರ್ಕಾರ ನಿನ್ನೆ ಜಿಲ್ಲೆಯ ಪ್ರಸಕ್ತ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ವರ್ಗಾವಣೆ  ಮಾಡಿ ಆದೇಶ ಹೊರಡಿಸಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror