ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಹೇಳಿದ್ದಾರೆ.
ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್‌ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದರು. ಅಕ್ರಮ ಗೋಹತ್ಯೆ ಮತ್ತು ಸಾಗಾಟ, ಮಾದಕ ಪದಾರ್ಥಗಳ ಸಾಗಾಟ ಅಥವಾ ಮಾರಾಟ, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಾ.ಅರುಣ್ ಎಚ್ಚರಿಸಿದರು. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯ ಬೆನ್ನಲ್ಲೇ ರಾಜ್ಯ ಸರ್ಕಾರ ನಿನ್ನೆ ಜಿಲ್ಲೆಯ ಪ್ರಸಕ್ತ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…