ಪುತ್ತೂರು | ಸರಣಿ ಕಳ್ಳತನ ನಡೆಸಿದ ಅಂತಾರಾಜ್ಯ ಕಳ್ಳ ಪೋಲಿಸ್ ವಶ

Advertisement
Advertisement

ಪುತ್ತೂರು ತಾಲೂಕಿನಲ್ಲಿ ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್‌ ನಿವಾಸಿ ಆರೋಪಿ ಮಹಮ್ಮದ್‌ ಕೆ.ಯು. (42)ಬಂಧಿತ ಆರೋಪಿ.

Advertisement

ಆರೋಪಿ ಕಳೆದ ವರ್ಷ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಿಸರದ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್‌ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಿಸರಗಳಲ್ಲಿ ಕಳ್ಳತನ ನಡೆಸಿರುವುದು ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ.ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಪುತ್ತೂರು | ಸರಣಿ ಕಳ್ಳತನ ನಡೆಸಿದ ಅಂತಾರಾಜ್ಯ ಕಳ್ಳ ಪೋಲಿಸ್ ವಶ"

Leave a comment

Your email address will not be published.


*