ಪುತ್ತೂರು ತಾಲೂಕಿನಲ್ಲಿ ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್ ನಿವಾಸಿ ಆರೋಪಿ ಮಹಮ್ಮದ್ ಕೆ.ಯು. (42)ಬಂಧಿತ ಆರೋಪಿ.
ಆರೋಪಿ ಕಳೆದ ವರ್ಷ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಿಸರದ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಿಸರಗಳಲ್ಲಿ ಕಳ್ಳತನ ನಡೆಸಿರುವುದು ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ.ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…