ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹವು ಗೋಣಿಯಲ್ಲಿ ತುಂಬಿಸಿದ ರೀತಿಯಲ್ಲಿ ಪತ್ತೆಯಾಗಿದೆ.ದೆಹಲಿ ಹಾಗೂ ದೇಶದ ವಿವಿಧ ಕಡೆಯ ಪ್ರಕರಣಗಳು ಚರ್ಚೆಯಾಗುತ್ತಿರುವ ನಡುವೆಯೂ ಸುಳ್ಯದಲ್ಲೂ ಅದೇ ಮಾದರಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ.
ಇಂದು ಪಕ್ಕದ ರೂಂ ನವರಿಗೆ ವಾಸನೆ ಬರಲು ಆರಂಭಿಸಿದಾಗ ಸಂಶಯ ಮೂಡಿತು. ಅವನು ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ ಎಂಬ ಸಂದೇಹದ ಮೇರೆಗೆ ಅವರು ಹೊಟೇಲ್ ಮಾಲೀಕರಿಗೆ ತಿಳಿಸಿ ಹೊಟೇಲ್ ಮಾಲಕರು ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಶಂಕಿತ ಆರೋಪಿ ಪರಾರಿಯಾಗಿದ್ದು, ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…