ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ ಭಾಗದಲ್ಲಿ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯಬಾರದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಸ ಎಸೆದರೆ ಸಿಸಿ ಕ್ಯಾಮರಾ ಮೂಲಕ ಪರಿಶೀಲಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ತಮ್ಮ ಮನೆಯ ಕಸವನ್ನು ಹಸಿಕಸ ಮತ್ತು ಒಣ ಕಸವನ್ನಾಗಿ ಬೇರ್ಪಡಿಸಿ ಕಸದ ವಾಹನಕ್ಕೆ ಹಾಕುವುದರಿಂದ ನಮ್ಮೆಲ್ಲರ ಆರೋಗ್ಯ ಹಾಗೂ ನಗರದ ಆರೋಗ್ಯ ಕಾಪಾಡಲು ಸಾಧ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel