ಬೀದರ್ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್/ಎಸ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಪ್ರತಿ ಹೆಕ್ಟೇರಗೆ ಮಳೆಯಾಶ್ರಿತ 8 ಸಾವಿರದ 500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಮತ್ತು ಬಹುವಾರ್ಷಿಕ ಬೆಳೆಗಳಿಗೆ 22 ಸಾವಿರ 500 ರೂಪಾಯಿ ಗಳಂತೆ ಬೆಳೆ ಹಾನಿಯಾದ ರೈತರಿಗೆ 10 ಹಂತಗಳಲ್ಲಿ ಒಟ್ಟು 1 ಲಕ್ಷದ 76 ಸಾವಿರದ 382 ರೈತರಿಗೆ 127 ಕೋಟಿ 16 ಲಕ್ಷ ರೂಪಾಯಿ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ. ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಘೋಷಿಸಲಾದ ಹೆಚ್ಚುವರಿ ಪರಿಹಾರ ಮೊತ್ತ 8 ಸಾವಿರದ 500 ರೂಪಾಯಿಗಳನ್ನು 7 ಹಂತಗಳಲ್ಲಿ ಒಟ್ಟು 1 ಲಕ್ಷದ 86 ಸಾವಿರದ 426 ರೈತರಿಗೆ 134 ಕೋಟಿ 27 ಲಕ್ಷ ರೂಪಾಯಿಗಳ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. 8615 ರೈತರಿಗೆ ತಾಂತ್ರಿಕ ಕಾರಣದಿಂದ ಪರಿಹಾರ ಇನ್ನೂ ಬರಬೇಕಿದೆ ಎಂದು ಅವರು ತಿಳಿಸಿದರು.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…