ಬೆಳೆ ಹಾನಿ ಪರಿಹಾರ ಅಕ್ಟೋಬರ್ 30 ರೊಳಗೆ ಪಾವತಿ

October 16, 2025
11:10 AM

ಬೀದರ್ ಜಿಲ್ಲೆಯಲ್ಲಿ ಸೆಪ್ಟೆಂಬರ್‌ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂಪಾಯಿ ಪರಿಹಾರ ಸೇರಿದಂತೆ ಒಟ್ಟಾರೆ 300 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರವನ್ನು ಇದೇ 30 ರೊಳಗೆ ಪಾವತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ ಹಾನಿ ಪ್ರದೇಶದ ತಹಶೀಲ್ದಾರರು ಪರಿಹಾರದ ಪೋರ್ಟಲ್‌ನಲ್ಲಿ ಹಾನಿಯ ಪ್ರಮಾಣವನ್ನು ಕಡ್ಡಾಯವಾಗಿ ದಾಖಲಿಸಿ, ಪರಿಹಾರ ನೀಡಿಕೆಗೆ ನಾಳೆಯೊಳಗೆ ತುರ್ತು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ನಿಯಮದಂತೆ 170 ಕೋಟಿ ರೂಪಾಯಿ ಪರಿಹಾರವನ್ನು ಈಗಾಗಲೇ ಪಾವತಿಸಲಾಗುತ್ತಿದೆ. ಇದೇ 30 ರೊಳಗೆ 300 ಕೋಟಿ ರೂಪಾಯಿ ಪರಿಹಾರ ಮೊತ್ತ ಪಾವತಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Advertisement

ಸಭೆಯಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಜೀವಹಾನಿ, ಬೆಳೆಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ದೀಪಾವಳಿಯೊಳಗೆ ಪರಿಹಾರ ನೀಡುವುದಾಗಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮಾನವೀಯ ನೆಲೆಗಟ್ಟಿನಲ್ಲಿ ಹಗಲಿರುಳು ಶ್ರಮಿಸಿ, ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದವರ ನೆರವಿಗೆ ಧಾವಿಸಬೇಕು ಎಂದು ಆದೇಶ ನೀಡಿದರು. ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಪೋರ್ಟಲ್ ನಲ್ಲಿ ದಾಖಲಿಸುವ ಪ್ರತಿಯೊಂದು ಮಾಹಿತಿಯನ್ನೂ ಗ್ರಾಮಪಂಚಾಯ್ತಿ, ತಹಶೀಲ್ದಾರರ ಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಬಹಿರಂಗವಾಗಿ ಪ್ರಕಟಿಸುವಂತೆ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ
July 3, 2026
6:46 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror