ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್ ಅನುದಾನದ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್‌ಗೆ 8500 ರೂಪಾಯಿ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವೈಮಾನಿಕ ಸಮೀಕ್ಷೆ ಮತ್ತು ಅಧಿಕಾರಿಗಳ ಸಭೆಯ ಬಳಿಕ ಅವರು, ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500 ರೂಪಾಯಿ ನೀರಾವರಿ ಜಮೀನಿಗೆ ಹೆಕ್ಟೇರ್ ಗೆ 17 ಸಾವಿರ, ಬಹು ವಾರ್ಷಿಕ ಬೆಳೆಗೆ 22 500 ರೂಪಾಯಿ ಇದೆ. ಈ ಹಣವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಆಗಲಿದೆ. ರಾಜ್ಯ ಸರ್ಕಾರವು 8500 ರೂಪಾಯಿ ಹೆಚ್ಚುವರಿ ಪರಿಹಾರ ನೀಡಲಿದೆ. ಇದರಿಂದ ಕುಷ್ಕಿ ಜಮೀನಿಗೆ ಹೆಕ್ಟೇರ್ ಒಟ್ಟು 17 ಸಾವಿರ ರೂಪಾಯಿ ಆಗಲಿದೆ.ನೀರಾವರಿ ಜಮೀನಿಗೆ 25 500 ರೂಪಾಯಿ ಆಗಲಿದೆ. ವಾರ್ಷಿಕ ಬೆಳೆಗೆ ಹೆಕ್ಟೇರ್ ಗೆ 31 ಸಾವಿರ ರೂಪಾಯಿ ಆಗಲಿದೆ ಎಂದು ಮಾಹಿತಿ ನೀಡಿದರು.
ಎನ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಪ್ಯಾಕೇಜ್ ಸೇರಿ 2 ಸಾವಿರ ರೂಪಾಯಿಯಿಂದ 2500 ಕ್ಕೂ ಹೆಚ್ಚು ಕೋಟಿ ಹಣ ಪರಿಹಾರ ಕೊಡಲಾಗುವುದು. ಪ್ರವಾಹದಿಂದ ಬೆಳೆ ಜತೆಗೆ ಮೂಲ ಸೌಕರ್ಯಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದರಿಂದ ರಾಜ್ಯಕ್ಕೆ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು. ಕಲಬುರಗಿ, ಬೀದರ್, ಯಾದಗಿರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ 117 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ. 80 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕೃಷ್ಣ ನದಿಯಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವುದು ಹಾಗೂ ನಾಲ್ಕೂ ಜಿಲ್ಲೆಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ನಲ್ಲಿ ವಿಪರೀತ ಮಳೆ ಆಗಿರುವುದೂ ಸೇರಿ ಅನಾಹುತ ಮತ್ತು ಸಂಕಷ್ಟದ ಪ್ರಮಾಣದ ಹೆಚ್ಚಾಗಿದೆ ಎಂದು ವಿವರಿಸಿದರು. ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವ ಅಂದಾಜಿದೆ. ಈ ಪ್ರಮಾಣ ಇನ್ನೂ ಹೆಚ್ಚು ಆಗಬಹುದು. ಜಂಟಿ ಸಮೀಕ್ಷೆ ಪೂರ್ಣಗೊಂಡ ಬಳಿಕ ಸ್ಪಷ್ಟವಾಗಲಿದ್ದು, ಸದ್ಯ 5 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಜಂಟಿ ಸಮೀಕ್ಷೆ ನಡೆಸಲಾಗಿದೆ. ಉಳಿದ ಸಮೀಕ್ಷೆ ಪೂರ್ಣಗೊಂಡ ಬಳಿಕ ಉಳಿದ ಪರಿಹಾರ ಮೊತ್ತವನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…