Advertisement
MIRROR FOCUS

ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ | ಪ್ರವಾಹ ಪೀಡಿತ ಪ್ರದೇಶಕ್ಕೆ ಹೆಕ್ಟೇರ್‌ಗೆ 8,500 ರೂಪಾಯಿ ಹೆಚ್ಚುವರಿ ಪರಿಹಾರ ಘೋಷಿಸಿದ ಸರ್ಕಾರ

Share

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್‌ ಅನುದಾನದ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್‌ಗೆ 8500 ರೂಪಾಯಿ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವೈಮಾನಿಕ ಸಮೀಕ್ಷೆ ಮತ್ತು ಅಧಿಕಾರಿಗಳ ಸಭೆಯ ಬಳಿಕ ಅವರು, ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500 ರೂಪಾಯಿ ನೀರಾವರಿ ಜಮೀನಿಗೆ ಹೆಕ್ಟೇರ್ ಗೆ 17 ಸಾವಿರ, ಬಹು ವಾರ್ಷಿಕ ಬೆಳೆಗೆ 22 500 ರೂಪಾಯಿ ಇದೆ. ಈ ಹಣವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಆಗಲಿದೆ. ರಾಜ್ಯ ಸರ್ಕಾರವು 8500 ರೂಪಾಯಿ ಹೆಚ್ಚುವರಿ ಪರಿಹಾರ ನೀಡಲಿದೆ. ಇದರಿಂದ ಕುಷ್ಕಿ ಜಮೀನಿಗೆ ಹೆಕ್ಟೇರ್ ಒಟ್ಟು 17 ಸಾವಿರ ರೂಪಾಯಿ ಆಗಲಿದೆ.ನೀರಾವರಿ ಜಮೀನಿಗೆ 25 500 ರೂಪಾಯಿ ಆಗಲಿದೆ. ವಾರ್ಷಿಕ ಬೆಳೆಗೆ ಹೆಕ್ಟೇರ್ ಗೆ 31 ಸಾವಿರ ರೂಪಾಯಿ ಆಗಲಿದೆ ಎಂದು ಮಾಹಿತಿ ನೀಡಿದರು.

ಎನ್‌ಡಿಆರ್‌ಎಫ್‌ ಮತ್ತು ರಾಜ್ಯ ಸರ್ಕಾರದ ಪ್ಯಾಕೇಜ್ ಸೇರಿ 2 ಸಾವಿರ ರೂಪಾಯಿಯಿಂದ 2500 ಕ್ಕೂ ಹೆಚ್ಚು ಕೋಟಿ ಹಣ ಪರಿಹಾರ ಕೊಡಲಾಗುವುದು. ಪ್ರವಾಹದಿಂದ ಬೆಳೆ ಜತೆಗೆ ಮೂಲ ಸೌಕರ್ಯಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದರಿಂದ ರಾಜ್ಯಕ್ಕೆ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು. ಕಲಬುರಗಿ, ಬೀದರ್‌, ಯಾದಗಿರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ 117 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ. 80 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕೃಷ್ಣ ನದಿಯಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವುದು ಹಾಗೂ ನಾಲ್ಕೂ ಜಿಲ್ಲೆಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ನಲ್ಲಿ ವಿಪರೀತ ಮಳೆ ಆಗಿರುವುದೂ ಸೇರಿ ಅನಾಹುತ ಮತ್ತು ಸಂಕಷ್ಟದ ಪ್ರಮಾಣದ ಹೆಚ್ಚಾಗಿದೆ ಎಂದು ವಿವರಿಸಿದರು. ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವ ಅಂದಾಜಿದೆ. ಈ ಪ್ರಮಾಣ ಇನ್ನೂ ಹೆಚ್ಚು ಆಗಬಹುದು. ಜಂಟಿ ಸಮೀಕ್ಷೆ ಪೂರ್ಣಗೊಂಡ ಬಳಿಕ ಸ್ಪಷ್ಟವಾಗಲಿದ್ದು, ಸದ್ಯ 5 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಜಂಟಿ ಸಮೀಕ್ಷೆ ನಡೆಸಲಾಗಿದೆ. ಉಳಿದ ಸಮೀಕ್ಷೆ ಪೂರ್ಣಗೊಂಡ ಬಳಿಕ ಉಳಿದ ಪರಿಹಾರ ಮೊತ್ತವನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

7 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

12 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

2 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 days ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 days ago