ರಾಜ್ಯದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ 5.20 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 550 ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ. ಪ್ರಾಥಮಿಕ ಸಮೀಕ್ಷೆಯಂತೆ 4,80,256 ಹೆಕ್ಟೇರ್ ಕೃಷಿ ಬೆಳೆ ಹಾಗೂ 40,407 ಹೆಕ್ಟೇರ್ ತೋಟಗಾರಿಕಾ ಬೆಳೆ ಸೇರಿ ಒಟ್ಟು 5,20,663 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಸದ್ಯಕ್ಕೆ 550 ಕೋಟಿ ರೂ. ಬೆಳೆ ನಷ್ಟ ಅಂದಾಜು ಮಾಡಲಾಗಿದೆ. ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಬೆಳೆ ನಷ್ಟ ಪರಿಹಾರ ವಿತರಣೆ ಆರಂಭವಾಗಲಿದ್ದು, ಆದಷ್ಟು ಶೀಘ್ರ ಪರಿಹಾರ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,’ ಎಂದು ಹೇಳಿದರು.
ಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ಶೇಕಡ 98ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82. 50ಲಕ್ಷ ಹೆಕ್ಟೇರ್ ಇದ್ದು, ಈವರೆಗೆ 80.76 ಹೆಕ್ಟೇರ್ ನಲ್ಲಿ ಬಿತ್ತನೆಯಾಗಿದೆ. ಮಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಬೇಕು ಎಂದು ತಿಳಿಸಿದರು. ಮಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಬೇಕು ಎಂದ ಅವರು, ಮಳೆಯಿಂದ ಕಳೆದ ಏಪ್ರಿಲ್ ನಿಂದ ಈವರೆಗೆ 111 ಮಂದಿ ಸಾವನ್ನಪ್ಪಿದ್ದು, ಎಲ್ಲ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. 651 ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಈ ಪೈಕಿ 8608 ಮನೆಗಳಿಗೆ ಪರಿಹಾರ ನೀಡಲಾಗಿದೆ. ಈ ಅವಧಿಯಲ್ಲಿ 766 ಜಾನುವಾರುಗಳು ಸಾವನ್ನಪ್ಪಿದ್ದು, 1.52 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…