ಕೃಷಿಕರು ಗಮನಿಸಿ | ಹವಾಮಾನ ಆಧಾರಿತ ಬೆಳೆ ವಿಮೆ | ವಿಮಾ ಕಂತು ಪಾವತಿಸಲು ಜೂನ್ 30 ಅಂತಿಮ ದಿನ |

May 21, 2022
10:15 PM
News Summary
ಹವಾಮಾನ ಆಧಾರಿತ ಬೆಳೆ ವಿಮೆಗೆ ಚಾಲನೆ | ಜೂ.30 ಕೊನೆಯ ದಿನ ವಿಮಾ ಕಂತು ಪಾವತಿಗೆ |

ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ  ಮುಂಗಾರು ಹಂಗಾಮಿಗೆ ಅನ್ವಯಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನುಷ್ಟಾನಗೊಳಿಸಲು ಅಧಿಸೂಚಿಸಲಾಗಿದೆ.2022ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ವಿಮಾ ಕಂತು ಪಾವತಿಸಲು ಜೂನ್ 30 ಅಂತಿಮ ದಿನವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

ಈ ಯೋಜನೆಯು ಅಧಿಸೂಚಿತ ಬೆಳೆಗಳಿಗೆ ರಾಷ್ಟ್ರೀಕೃತ, ಖಾಸಗಿ ಹಾಗೂ ಸಹಕಾರಿ ಬ್ಯಾಂಕ್ ಗಳಿಂದ ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಚಿಕವಾಗಿರುತ್ತದೆ. ಈ ಯೋಜನೆಯಡಿ ತೋಟಗಾರಿಕೆ ರೈತರು ಅಧಿಸೂಚಿತ ಬೆಳೆಗಳಿಗೆ ಸಂಬಂಧಿಸಿ ಸಾಲ ಪಡೆದುಕೊಂಡಿರುವ ಬ್ಯಾಂಕ್‍ಗಳ ಮೂಲಕ ಹಾಗೂ ಸಾಲ ಪಡೆಯದಿರುವ ರೈತರು ಉಳಿತಾಯ ಖಾತೆಯನ್ನು ಹೊಂದಿರುವ ಬ್ಯಾಂಕ್ ಗಳ ಮೂಲಕ ವಿಮಾ ಕಂತುಗಳನ್ನು ಪಾವತಿಸಿ ಯೋಜನೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

Advertisement
ಅಡಿಕೆ ಬೆಳೆಗೆ ಪ್ರತೀ ಹೆಕ್ಟೆರ್ ಗೆ ವಿಮಾ ಮೊತ್ತ 128000 ರೂ.ಗಳಲ್ಲಿ, ರೈತರು ಪಾವತಿಸಬೇಕಾದ ವಿಮಾಕಂತು 6,400 ರೂ.ಗಳು, ಕರಿಮೆಣಸು ಪ್ರತೀ ಹೆಕ್ಟೆರ್ ಗೆ ವಿಮಾ ಮೊತ್ತ 47,700 ರೂ.ಗಳಲ್ಲಿ ರೈತರು ಪಾವತಿಸಬೇಕಾದ ವಿಮಾಕಂತು 2,350 ರೂ.ಗಳು. ಈ ಯೋಜನೆಯಡಿ 2022ರ ಮುಂಗಾರು ಹಂಗಾಮಿನಲ್ಲಿ ಸ್ಥಳೀಯ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಮೇಘಸ್ಫೋಟದಿಂದ ಬೆಳೆನಷ್ಟ ಸಂಭವಿಸಿದಲ್ಲಿ ಬೆಳೆವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಟಾನಗೊಳಿಸುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ಹಾನಿ ಸಂಭವಿಸಿದ 72 ಗಂಟೆಯೊಳಗೆ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣಗಳನ್ನು ಲಿಖಿತವಾಗಿ ನೀಡಬೇಕು. ಇಂತಹ ಸಂದರ್ಭದಲ್ಲಿ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆವಿಮಾ ನಷ್ಟ ಪರಿಹಾರವನ್ನು ವಿಮಾ ಸಂಸ್ಥೆಯು ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳ ಸಹಯೊಗದೊಂದಿಗೆ ಇತ್ಯರ್ಥ ಪಡಿಸುತ್ತದೆ. ಇದರ ಹೊರತು ಸಾಮಾನ್ಯ ಸಂದರ್ಭಗಳಲ್ಲಿ ಬೆಳೆ ನಷ್ಟಗಳನ್ನು ಜಿಲ್ಲಾ ಸಮಿತಿ ಹಾಗೂ ಸರ್ಕಾರಗಳು ಅನುಮೋದಿಸಿರುವ ಟೀಮ್ ಶೀಟ್ ಗಳಲ್ಲಿನ ಪೇ ಔಟ್ ಸ್ಟ್ರಕ್ಚರ್, ಡ್ಯೂರೇಷನ್,  ಪರಿಗಣಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ವಿಮಾ ಸಂಸ್ಥೆಗಳು ಲೆಕ್ಕ ಹಾಕಿ ಇತ್ಯರ್ಥ ಪಡಿಸುತ್ತವೆ.

ಹಣಕಾಸು ಸಂಸ್ಥೆಗಳಿಂದ ಬೆಳೆ ಸಾಲವನ್ನು ಹೊಂದಿಲ್ಲದ ತೋಟಗಾರಿಕೆ ರೈತರು ನಿಗದಿತ ಅರ್ಜಿಯೊಂದಿಗೆ ಜಮೀನಿನ ಪಹಣಿ ಪ್ರತಿ, ಉಳಿತಾಯ ಖಾತೆ ಪಾಸ್ ಪುಸ್ತಕ,ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಹೊಂದಿಲ್ಲದಿದ್ದಲ್ಲಿ ಸರ್ಕಾರದ ಇತರೆ ಯಾವುದೇ ಅಧಿಕೃತ ಗುರುತಿನ ಚೀಟಿ,ಸ್ವಯಂ ಘೋಷಿಸಿ ದೃಢೀಕರಿಸಿದ ಜಮೀನಿನ ಬೆಳೆ ಪತ್ರ ಹಾಗೂ ಪ್ರಿಮಿಯಂ ವಿಮಾ ಮೊತ್ತದೊಂದಿಗೆ ಸಲ್ಲಿಸಿ ನೊಂದಣಿ ಮಾಡಿಸಿಕೊಳ್ಳಬಹುದು. ಈ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಕರ್ನಾಟಕ ಸರ್ಕಾರಗಳು ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿಸಲು ಉದ್ದೇಶಿಸಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಯೋಜನೆಯ ಲಾಭವನ್ನು ಪಡೆಯಲು ಕೋರಲಾಗಿದೆ.

Advertisement

ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ ಬ್ಯಾಂಕ್, ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಥವಾ ಕೃಷಿ ಅಧಿಕಾರಿಗಳು, ತಾಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯನ್ನು ಅಥವಾ ಮಂಗಳೂರು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ: 8277806378, ದೂ.ಸಂಖ್ಯೆ: 0824-2423615, ಬಂಟ್ವಾಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ:9448206393 ದೂ.ಸಂಖ್ಯೆ:08255-234102, ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ:9731854527 ದೂ.ಸಂಖ್ಯೆ: 08251-230905, ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ: 9880993238, ದೂ.ಸಂಖ್ಯೆ:08257-232020, ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ:9448336863 ದೂ.ಸಂಖ್ಯೆ: 08256-232148 ಮೂಲಕ ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror