ಬೆಳೆ ವಿಮೆ |Crop Insurance | ಕೃಷಿಕರ ಖಾತೆಗೆ ವಿಮೆ ಹಣ ಜಮೆ ಆರಂಭ |

October 8, 2022
3:48 PM

ಮುಂಗಾರು ಮಳೆಯ ಪೂರ್ವದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆಯ ಮೂಲಕ  ಕೃಷಿಕರು ಬೆಳೆ ವಿಮೆಯ ಹಣ ಪಾವತಿ ಮಾಡಿದ್ದರು. ಇದೀಗ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಳೆಯಾದ ಕಾರಣದಿಂದ ಪರಿಹಾರದ ಹಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖಾತೆಗೆ ಜಮೆಯಾಗಲು ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಕೃಷಿಕರ ಬೆಳೆ ಭದ್ರತೆಗಾಗಿ ವಿಮಾ ಕಂಪನಿಗಳ ಮೂಲಕ ಬೆಳೆ ವಿಮೆಯನ್ನು ರೈತರಿಂದ ಮಾಡಿಸಿತ್ತು. ಈ ಬಾರಿ ಕೂಡಾ ಬೆಳೆ ವಿಮೆಗೆ ಕೃಷಿಕರು ಸಹಕಾರಿ ಸಂಘಗಳ ಮೂಲಕ ಅಥವಾ ಖಾಸಗಿಯಾಗಿ ಹಣ ಪಾವತಿ ಮಾಡಿದ್ದರು. ಇದೀಗ ಹವಾಮಾನ ಆಧಾರಿತವಾಗಿ ಬೆಳೆ ವಿಮೆಗೆ ಹಣ ಪಾವತಿ ಆರಂಭವಾಗಿದೆ. ರೈತರು ಬೆಳೆ ವಿಮೆಯ ಸಂದರ್ಭ ನೀಡಿದ್ದ ಬ್ಯಾಂಕ್‌ ಖಾತೆಗೆ ಅಥವಾ ಆಧಾರ್‌ ಜೊತೆ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ರೈತರಿಗೆ ಹಣ ಜಮೆಯಾದ ತಕ್ಷಣವೇ ಮೆಸೇಜ್‌ ಬರುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror