#CropInsurance | ಹವಾಮಾನ ಆಧಾರಿತ ಬೆಳೆ ವಿಮೆ ಜಾರಿಗೆ ಒತ್ತಾಯ | ಸುಳ್ಯ ಸಹಕಾರಿ ಯೂನಿಯನ್ |

July 1, 2023
2:44 PM

ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರಕಾರ ತಕ್ಷಣ ಜಾರಿ ಮಾಡುವಂತೆ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಿಂದ ಕೃಷಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತಿ ವರ್ಷ ಜೂ.30ರೊಳಗೆ ಪ್ರೀಮಿಯಂ ಪಾವತಿಯಾಗಿರುತ್ತದೆ. ಆದರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಕ್ಕೆ ಪ್ರೀಮಿಯಂ ಪಾವತಿಗೆ ಯಾವುದೇ ಆದೇಶಗಳು ಬಂದಿಲ್ಲ. ಹೀಗಾಗಿ ಸರಕಾರ ವಿಳೆವಿಮೆ ಪಾವತಿಗೆ ಸಹಕಾರಿ ಸಂಘಗಳಿಗೆ ತಕ್ಷಣ ಆದೇಶ ನೀಡಬೇಕು. ವಿಳಂಬವಾದರೆ ಸಹಕಾರಿ ಸಂಘಗಳಿಗೂ ಕೆಲಸದ ಒತ್ತಡಗಳು ಹೆಚ್ಚಾಗುತ್ತವೆ ಎಂದು  ಹೇಳಿದರು

ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,ಸಹಕಾರಿ ಯೂನಿಯನ್ ನಿರ್ದೇಶಕರಾದ ದಯಾನಂದ ಕುರುಂಜಿ, ಶಾರದಾ ವಿ. ಶೆಟ್ಟಿ, ಸಹಕಾರಿ ಯೂನಿಯನ್ ಕಾರ್ಯದರ್ಶಿ ವಾಸುದೇವ ನಾಯಕ್ ಕೇರ್ಪಳ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror