ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

August 4, 2023
8:04 PM
2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ.ಜು.31ರೊಳಗೆ ಈ ಯೋಜನೆಗೆ ರೈತರು ನೋಂದಾಯಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ.

Advertisement

ದ ಕ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್ ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ಗಳಲ್ಲಿ ಈ ಯೋಜನೆಯಡಿ ನೋಂದಾಯಿಸಬಹುದು. ಸಾರ್ವಜನಿಕ ಸೇವಾ ಕೇಂದ್ರದ ಮೂಲಕವೂ ನೋಂದಾಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಕ್ರಮವಾಗಿ 6,400 ರೂ. ಹಾಗೂ 2,350 ರೂ.ಗಳಾಗಿದ್ದು ಜು.31ರೊಳಗೆ ನೋಂದಾಯಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-04-2025 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಎ.4 ರಿಂದ ಮಳೆ ಪ್ರಮಾಣ ಕಡಿಮೆ
April 3, 2025
5:50 PM
by: ಸಾಯಿಶೇಖರ್ ಕರಿಕಳ
ಒಂದು ವರ್ಷದಲ್ಲಿ 5600 ಕಿ.ಮೀ. ಹೆದ್ದಾರಿ ನಿರ್ಮಾಣ |
April 3, 2025
7:42 AM
by: The Rural Mirror ಸುದ್ದಿಜಾಲ
81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ
April 3, 2025
7:32 AM
by: The Rural Mirror ಸುದ್ದಿಜಾಲ
ಮೇಷ ರಾಶಿಯವರಿಗೆ ಬಹಳ ಶುಭ ದಿನ
April 3, 2025
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group