ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ.
ದ ಕ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್ ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ಗಳಲ್ಲಿ ಈ ಯೋಜನೆಯಡಿ ನೋಂದಾಯಿಸಬಹುದು. ಸಾರ್ವಜನಿಕ ಸೇವಾ ಕೇಂದ್ರದ ಮೂಲಕವೂ ನೋಂದಾಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಕ್ರಮವಾಗಿ 6,400 ರೂ. ಹಾಗೂ 2,350 ರೂ.ಗಳಾಗಿದ್ದು ಜು.31ರೊಳಗೆ ನೋಂದಾಯಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…