ಚಿಕ್ಕಮಗಳೂರು ಜಿಲ್ಲೆಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿಗೆ ಮತ್ತು ಮುಂಬರುವ ಬೇಸಿಗೆ ಹಂಗಾಮಿನ ಬೆಳೆಗಳಿಗೆ ವಿಮೆಯನ್ನು ನೋಂದಾಯಿಸಿಕೊಳ್ಳಲು ಕರ್ನಾಟಕ ರೈತ ಸುರಕಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಕೃಷಿ ಇಲಾಖೆಯು ರೈತರಿಗೆ ಕರೆ ನೀಡಿದೆ. ಈ ಯೋಜನೆಯ ಲಾಭವನ್ನು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ಎಲ್ಲಾ ರೈತರು ಪಡೆದುಕೊಳ್ಳಬಹುದು. ಡಿ.1 ಅಂತಿಮ ದಿನವಾಗಿದೆ.
ಈ ವಿಮಾ ಯೋಜನೆಯು ಹವಾಮಾನ ವೈಪರೀತ್ಯ ಅಥವಾ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು ಒದಗಿಸುತ್ತದೆ. ರೈತರು ತಮ್ಮ ಪ್ರದೇಶದಲ್ಲಿ ಲಭ್ಯವಿರುವ ನಿರ್ದಿಷ್ಟ ಬೆಳೆಗಳ ಮಾಹಿತಿಯನ್ನು ಕೃಷಿ ಇಲಾಖೆಯಲ್ಲಿ ದೃಢಿಕರಿಸಿಕೊಳ್ಳಬೇಕು. ಏಕೆಂದರೆ ಗ್ರಾಮ ಪಂಚಾಯತ್ ಮಟ್ಟ ಮತ್ತು ಹೋಬಳಿ ಮಟ್ಟದ ಬೆಳೆಗಳಿಗೆ ನಷ್ಟ ಅಂದಾಜಿಸುವ ಮಾನದಂಡಗಳು ಬದಲಾವಣೆ ಇದೆ. ಈ ಯೋಜನೆಗಳ ನೊಂದಾಯಿತ ದಿನವು ಬದಲಾವಣೆ ಇರುವುದರಿಂದ ರೈತರು ತಪ್ಪದೆ ಆಯಾ ಗ್ರಾಮದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಇಲಾಖೆ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…