2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ, ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ವಿಮೆ ಯೋಜನೆ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಮುಖ್ಯ ಬೆಳೆಯಾಗಿ ರಾಗಿ, ಭತ್ತ, ಮುಸುಕಿನಜೋಳ, ತೊಗರಿ, ನೆಲಗಡಲೆ, ಹುರುಳಿ ಮತ್ತು ಟೊಮ್ಯಾಟೋ ಬೆಳೆಗಳನ್ನು ಇತೆರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ. ಟೊಮ್ಯಾಟೋ ಮತ್ತು ತೊಗರಿ ಬೆಳೆಗೆ ಜುಲೈ 15, ನೆಲಗಡಲೆ ಬೆಳೆಗೆ ಜುಲೈ 31 ಹಾಗೂ ಉಳಿದಂತೆ ರಾಗಿ, ಭತ್ತ, ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳಿಗೆ ಆಗಸ್ಟ್ 16 ರವರೆಗೆ ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಬಿ.ಜಿ.ಕಲಾವತಿ ತಿಳಿಸಿದ್ದಾರೆ.
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…