ಸುದ್ದಿಗಳು

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿರುತ್ತದೆ.

Advertisement

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ ಭತ್ತವು ನೊಂದಾಯಿತ ಬೆಳೆಯಾಗಿದ್ದು, ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ ವಿಕೋಪಗಳಿಂದ/ ಹವಾಮಾನ ವೈಪರೀತ್ಯದಿಂದಾಗಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ.25ರ ಭಾಗವನ್ನು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ. ಕಟಾವಿನ ನಂತರದ ಸಮಯದಲ್ಲಿ ಬೆಳೆಯನ್ನು ಒಣಗಿಸಲು ಬಿಟ್ಟ ಸಂದರ್ಭದಲ್ಲಿ 2 ವಾರದೊಳಗೆ ಅಕಾಲಿಕ ಮಳೆ/ಚಂಡಮಾರುತ ಸಹಿತ ಮಳೆಯಿಂದಾಗಿ ಕಟಾವು ಮಾಡಲಾದ ಬೆಳೆಯು ನಾಶವಾದರೆ ವಿಮಾ ಸಂಸ್ಥೆಯು ವೈಯಕ್ತಿಕವಾಗಿ ಬೆಳೆ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸುತ್ತದೆ.

ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆಯಿಂದ ಉಂಟಾಗುವ ನಷ್ಟವನ್ನು ವೈಯಕ್ತಿಕ ಕ್ಷೇತ್ರವಾರು ನಿರ್ಧರಿಸಿ ರೈತರಿಗೆ ಬೆಳೆವಿಮಾ ನಷ್ಟ ಪರಿಹಾರವನ್ನು ನೀಡಲಾಗುತ್ತದೆ. 2025 ನೇ ಸಾಲಿನ ಮುಂಗಾರಿಗೆ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆಗೆ ನೊಂದಾಯಿಸಲು ಆಗಸ್ಟ್ 16 ಕೊನೆಯ ದಿನ. ಪ್ರತಿ ಎಕರೆಗೆ ವಿಮಾ ಮೊತ್ತ ರೂ.25800 ಆಗಿರುತ್ತದೆ ಹಾಗೂ ವಿಮಾ ಕಂತು (ರೈತರ ವಂತಿಕೆ) ಒಂದು ಎಕರೆಗೆ ರೂ.516 ಇರುತ್ತದೆ. ಅರ್ಹ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹತ್ತಿರದ ಬ್ಯಾಂಕುಗಳಲ್ಲಿ ನಿಗದಿತ ದಿನಾಂಕದೊಳಗೆ ವಿಮಾ ಕಂತಿನ ಮೊತ್ತವನ್ನು ಪಾವತಿಸಬೇಕಾಗಿ ಮತ್ತು ವಿಮೆ ಮಾಡಿಸಿದ ರೈತರು ಬೆಳೆ ನಷ್ಟದ ಬಗ್ಗೆ ಸಂಬಂಧಿಸಿದ ಹಣಕಾಸು ಸಂಸ್ಥೆ ಅಥವಾ ವಿಮಾಸಂಸ್ಥೆ ಕಛೇರಿಗಳಿಗೆ ನಷ್ಟ ಸಂಭವಿಸಿದ 72 ಗಂಟೆಯೊಳಗೆ ವಿಮೆ ಮಾಡಿಸಲಾದ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣವನ್ನು ತಿಳಿಸಬೇಕಾಗುತ್ತದೆ.

ಬೆಳೆ ಸಾಲ ಪಡೆದ/ಪಡೆಯದ ರೈತರಿಗೆ ಬೆಳೆ ವಿಮೆ ಐಚ್ಛಿಕ. ರೈತರು ನೋಂದಣಿಗಾಗಿ ಕಡ್ಡಾಯವಾಗಿ ಫ್ರೂಟ್ಸ್ ಐ.ಡಿ. (FID) ಹೊಂದಿರಬೇಕು. ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಚಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಮುಚ್ಚಳಿಕೆ ಪತ್ರ ನೀಡಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

4 hours ago

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…

4 hours ago

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

11 hours ago