Advertisement
MIRROR FOCUS

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

Share

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ.

ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಣಿಯಾಗಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್‍ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ಗಳಲ್ಲಿ ಯೋಜನೆಯಡಿ ನೋಂದಾಯಿಸಬಹುದು. ಸಾಮಾನ್ಯ ಸೇವಾ ಕೇಂದ್ರ (CSC) ಮತ್ತು ಗ್ರಾಮ ಒನ್‍ಗಳ ಮೂಲಕವೂ ನೋಂದಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಕ್ರಮವಾಗಿ ರೂ.6400 ಹಾಗೂ ರೂ.2350 ಗಳಾಗಿರುತ್ತದೆ. ಈ ಯೋಜನೆಯಡಿ ನೋಂದಣಿಗೊಳ್ಳಲು ಜುಲೈ 31  ಕೊನೆಯ ದಿನ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆಯ ಅನುಷ್ಟಾನಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯಾಗಿ ಪ್ರಸಕ್ತ ಸಾಲಿಗೆ ಟಾಟಾ ಎಐಜಿ ಸಂಸ್ಥೆಯು ಆಯ್ಕೆಯಾಗಿದೆ.

ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ದ.ಕ ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ ಡಿ- 9448999226, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ ಕೆ- 9449258204, ಬಂಟ್ವಾಳ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, – 9448206393, ಪುತ್ತೂರು  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ರೇಖಾ ಎ- 9731854527,   ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಸುಹಾನ ಪಿ.ಕೆ.- 9880993238, ಬೆಳ್ತಂಗಡಿ        ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್.- 9448336863, ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಶುಭಂ – 9131962255 ಸಂಪರ್ಕಿಸಬಹುದು ಎಂದು ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

11 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

24 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago