ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

May 23, 2025
10:27 PM

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ ಬೆಳೆಯು ಆಯಾ ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ದಾಖಲಾಗಿರಬೇಕಿರುತ್ತದೆ.  ಈ ಯೋಜನೆಯಡಿ ನೋಂದಾವಣೆಗೊಂಡ ಫಲಾನುಭವಿಗಳ ಸರ್ವೆ ನಂಬರ್ ಗಳಲ್ಲಿನ ಬೆಳೆಯ ಮಾಹಿತಿಯು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಸಂದರ್ಭದಲ್ಲಿ ಬೆಳೆ ವಿಮೆ ಪರಿಹಾರ ಮೊತ್ತವನ್ನು ಪಾವತಿಸುವ ಮುನ್ನ ಬೆಳೆ ಸಮೀಕ್ಷೆ ಕೈಗೊಂಡು ತದನಂತರ ಪ್ರಕರಣವನ್ನು ಇತ್ಯರ್ಥಪಡಿಸಲಾಗುತ್ತದೆ.

2023-24 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು  ಮೇ 31  ಕೊನೆಯ ದಿನ. ಈ ಕುರಿತು ಸಂಬಂಧಿಸಿದ ರೈತರಿಗೆ ಈಗಾಗಲೇ ಮೊಬೈಲ್ ಸಂದೇಶವನ್ನು ಕಳುಹಿಸಲಾಗಿರುತ್ತದೆ. 2023-24 ನೇ ಸಾಲಿನಲ್ಲಿ ಯೋಜನೆಯಡಿ ನೋಂದಾವಣೆಗೊಂಡ ಯಾವುದೇ ರೈತರು ಈ ರೀತಿಯ ಸಂದೇಶವನ್ನು ಸ್ವೀಕರಿಸಿದಲ್ಲಿ, ಬೆಳೆ ಸಾಲ ಹೊಂದಿರುವ ರೈತರು ತಾವು ನೋಂದಾವಣೆಗೊಂಡ ಬ್ಯಾಂಕ್ ಶಾಖೆಯನ್ನು ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror