ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…