ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದ ಬೆಳೆ ಹಾನಿ ಪ್ರದೇಶಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಧಿಕ ಮಳೆಯಿಂದ ಹೊಲದಲ್ಲಿ ಹೆಸರು ಬೆಳೆ ಹಾಳಾದ ದೃಶ್ಯವನ್ನು ಕಂಡ ಸಚಿವರು, ರೈತರಿಗೆ ತಕ್ಷಣ ಪರಿಹಾರ ಒದಗಿಸುವ ಭರವಸೆ ನೀಡಿ, ಈ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು ತಿಳಿಸಿದರು. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಹಾನಿ ಅಂಕಿ-ಅಂಶಗಳನ್ನು ಸರಿಯಾಗಿ ಸಂಗ್ರಹಿಸುವಂತೆ ಹಾಗೂ ರೈತರಿಗೆ ಶೀಘ್ರ ಪರಿಹಾರ ಒದಗಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಸಚಿವ ಎಚ್.ಕೆ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….

