ಗದಗದ ಬೆಳೆ ಹಾನಿ ಪ್ರದೇಶಕ್ಕೆ ಸಚಿವ ಎಚ್.ಕೆ. ಪಾಟೀಲ್ ಭೇಟಿ | ರೈತರಿಗೆ ಪರಿಹಾರ ಒದಗಿಸುವ ಭರವಸೆ

August 25, 2025
7:13 AM

ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದ ಬೆಳೆ ಹಾನಿ ಪ್ರದೇಶಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್  ಭೇಟಿ ನೀಡಿ ಪರಿಸ್ಥಿತಿಯನ್ನು  ಪರಿಶೀಲಿಸಿದರು. ಅಧಿಕ ಮಳೆಯಿಂದ ಹೊಲದಲ್ಲಿ ಹೆಸರು ಬೆಳೆ ಹಾಳಾದ ದೃಶ್ಯವನ್ನು ಕಂಡ ಸಚಿವರು, ರೈತರಿಗೆ ತಕ್ಷಣ ಪರಿಹಾರ ಒದಗಿಸುವ ಭರವಸೆ ನೀಡಿ, ಈ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು  ತಿಳಿಸಿದರು. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಹಾನಿ ಅಂಕಿ-ಅಂಶಗಳನ್ನು ಸರಿಯಾಗಿ ಸಂಗ್ರಹಿಸುವಂತೆ ಹಾಗೂ ರೈತರಿಗೆ ಶೀಘ್ರ ಪರಿಹಾರ ಒದಗಿಸಲು ತುರ್ತು ಕ್ರಮ ಕೈಗೊಳ್ಳುವಂತೆ  ಸಚಿವ ಎಚ್.ಕೆ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌
ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?
September 28, 2026
1:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror