ಅತಿಯಾದ ಮಳೆಯಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಹಾನಿಯಾದ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಿಸಿದರು. ಸತತವಾಗಿ ಸುರಿದ ಮಳೆಯಿಂದ ಬೆಳೆ ನಷ್ಟ ಉಂಟಾದ ಪ್ರಮುಖ ಹೊಲಗಳಿಗೆ ತೆರಳಿದ ಸಚಿವರು, ಹೆಸರು ಹಾಗೂ ತೊಗರಿ ಬೆಳೆಗಳನ್ನು ಪರಿಶೀಲನೆ ನಡೆಸಿದರು. ನಂತರ ಸೇಡಂ ತಾಲೂಕಿನ ಕಲಕಂಭ ಹಾಗೂ ಅಳ್ಳೊಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ ರೈತರ ಅಹವಾಲುಗಳನ್ನು ಆಲಿಸಿದರು. ಇದೇ ವೇಳೆ ಕೃಷಿ ಅಧಿಕಾರಿಗಳಿಗೆ ಬೆಳೆ ಹಾನಿ ಬಗ್ಗೆ ಪ್ರಾಥಮಿಕ ವರದಿಯನ್ನು ನೀಡುವಂತೆ ಸಚಿವರು ಸೂಚನೆ ನೀಡಿದರು.
ಅತಿಯಾದ ಮಳೆಯಿಂದ ಬೆಳೆ ಹಾನಿಗೊಳಗಾದ ಸೇಡಂ ತಾಲೂಕಿನ ಮುಧೋಳ, ಆಡಕಿ, ಬಿದರ್ ಚೇಡ್, ಹುಡಾ, ನೀಲಹಳ್ಳಿ, ಕೊಂಕನಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ತೊಗರಿ, ಹೆಸರು ಹಾಗೂ ಉದ್ದು ಬೆಳೆಗಳ ಸ್ಥಿತಿಯನ್ನು ಕಂಡು ಬೆಳೆ ಹಾನಿ ಪರಿಹಾರ ಒದಗಿಸುವ ಕುರಿತು ರೈತರಿಗೆ ಭರವಸೆ ನೀಡಿದರು. ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು, ಕೃಷಿ ಇಲಾಯಿಂದ ಒದಗಿಸಲಾಗುವ ಬೆಳೆ ಕಟಾವು ಯಂತ್ರಗಳ ಬಾಡಿಗೆ ಕಡಿಮೆ ದರದಲ್ಲಿ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….

