ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ ಉಳಿಯದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್ ಸೂಚನೆ ನೀಡಿದ್ದಾರೆ.
ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಬೆಳೆಗಳಿಗೆ ಬೇಕಾಗುವ ರಸಗೊಬ್ಬರವನ್ನು ರೈತರ ಬೇಡಿಕೆಯಂತೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಬೆಳೆಗಳಲ್ಲಿ ಕಂಡುಬರುವ ರೋಗಗಳ ನಿಯಂತ್ರಣ, ಹತೋಟಿ ಕ್ರಮಗಳ ಕುರಿತು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಬಿಪಿಎಲ್ ನಿಂದ ಎಪಿಎಲ್ ಹಾಗೂ ಆದಾಯ ತೆರಿಗೆ ಪಾವತಿದಾರರ ಕಾರ್ಡ್‌ಗಳು ರದ್ದಾಗಿದ್ದು, ಈ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…