2022-23ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ ಅಭಿವೃದ್ದಿ ಪಡಿಸಲಾಗಿದೆ. ದ ಕ ಜಿಲ್ಲೆಯ ರೈತರು ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿರುವ ವೆಬ್‍ಸೈಟ್ https://play.google.com/store/apps/details?id=com.csk.Khariffarner22_23.cropsurvey ಲಿಂಕ್ ಮೂಲಕ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಇದೇ ಸೆ.30ರೊಳಗೆ ಸ್ವತ: ಬೆಳೆ ಸಮೀಕ್ಷೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪ ಪರಿಹಾರ ವಿತರಣೆ, ಬೆಂಬಲ ಬೆಲೆ ಯೊಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.
ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.