#WeatherMirror| ಉತ್ತರ ಕರ್ನಾಟಕದಲ್ಲಿ ಮಳೆಗಾಗಿ ಕಾಯುತ್ತಿರುವ ಬೆಳೆಗಳು |

August 14, 2023
1:15 PM
ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಕ್ಷೀಣವಾಗಿದ್ದು, ತಾಪಮಾನ ಇಳಿಕೆಯಾಗಿದೆ. ಚಳಿಯ ಪ್ರಮಾಣ ಏರಿಕೆಯಾಗಿದೆ. ಈ ಬಾರಿ ರಾಜ್ಯಕ್ಕೆ ಮುಂಗಾರು ಕೊರತೆ ಉಂಟಾಗಿದೆ. ಮತ್ತೆ ಮುಂಗಾರು ಚುರುಕಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ

ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಒಳನಾಡಿನಲ್ಲಿ ಬಿಸಿಲಿನ ಪ್ರಖರತೆ ಕೊಂಚ ಹೆಚ್ಚಳವಾಗಲಿದೆ. ಆದರೆ ಕರ್ನಾಟಕದ #Karnataka  ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 20ರವರೆಗೆ ಧಾರಾಕಾರ ಮಳೆ#Rain ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.  ನಿನ್ನೆಯಿಂದ ರಾಜ್ಯದ ಕೆಲವೆಡೆ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ.

Advertisement
Advertisement
Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕನಕಪುರ, ಮಂಕಿ, ಉಡುಪಿಯಲ್ಲಿ ಮಳೆಯಾಗಿದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ, ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ 30 ರಿಂದ 32 ಡಿಗ್ರಿ ಸೆಲ್ಸಿಯಸ್​ವರೆಗೆ ತಾಪಮಾನ ದಾಖಲಾಗುತ್ತಿದೆ. ಇದರ ಜೊತೆ ಕೆಲ ಪ್ರದೇಶಗಳಲ್ಲಿ ಮಳೆಯ ಸಿಂಚನ ಆಗಿದೆ.

Advertisement

ಭಾರತೀಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇವುಗಳಲ್ಲಿ ಹಿಮಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಉತ್ತರಾಖಂಡದ ಹೆಸರುಗಳೂ ಸೇರಿವೆ. ಸದ್ಯ, ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ ಉತ್ತರಾಖಂಡದಲ್ಲಿ ಸಂಕಷ್ಟದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಅದೇ ಸಮಯದಲ್ಲಿ, ಹವಾಮಾನ ಇಲಾಖೆ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.  ಪ್ರಸ್ತುತ, ಭಾರತೀಯ ಹವಾಮಾನ ಇಲಾಖೆ ಉತ್ತರಾಖಂಡದಲ್ಲಿ ಮಳೆಗಾಗಿ ರೆಡ್ ಅಲರ್ಟ್ ಘೋಷಿಸಿದೆ ಮತ್ತು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಆರು ಜಿಲ್ಲೆಗಳಲ್ಲಿ ಸಿಡಿಲು ಮುನ್ಸೂಚನೆ ನೀಡಿದೆ.

(With inputs from agencies)

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕವಲ್ಲ | WHO ವರದಿ ಸತ್ಯಕ್ಕೆ ದೂರವಾದುದು | ಅಧ್ಯಯನದ ನೆರವಿಗೆ ಕೇಂದ್ರ ಸರ್ಕಾರಕ್ಕೆ ಮನವಿ | ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿಕೆ |
November 22, 2024
4:02 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror