ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಒಳನಾಡಿನಲ್ಲಿ ಬಿಸಿಲಿನ ಪ್ರಖರತೆ ಕೊಂಚ ಹೆಚ್ಚಳವಾಗಲಿದೆ. ಆದರೆ ಕರ್ನಾಟಕದ #Karnataka ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 20ರವರೆಗೆ ಧಾರಾಕಾರ ಮಳೆ#Rain ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ರಾಜ್ಯದ ಕೆಲವೆಡೆ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕನಕಪುರ, ಮಂಕಿ, ಉಡುಪಿಯಲ್ಲಿ ಮಳೆಯಾಗಿದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ, ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ 30 ರಿಂದ 32 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ದಾಖಲಾಗುತ್ತಿದೆ. ಇದರ ಜೊತೆ ಕೆಲ ಪ್ರದೇಶಗಳಲ್ಲಿ ಮಳೆಯ ಸಿಂಚನ ಆಗಿದೆ.
ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಕ್ಷೀಣವಾಗಿದ್ದು, ತಾಪಮಾನ ಇಳಿಕೆಯಾಗಿದೆ. ಚಳಿಯ ಪ್ರಮಾಣ ಏರಿಕೆಯಾಗಿದೆ. ಈ ಬಾರಿ ರಾಜ್ಯಕ್ಕೆ ಮುಂಗಾರು#Mansoon ಕೊರತೆ ಉಂಟಾಗಿದೆ. ಜುಲೈನಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಜಲಾಶಯ#Damಗಳಲ್ಲಿ ನೀರು ಶೇಖರಣೆ ಆಗಿದೆ. ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಉತ್ತರ ಕರ್ನಾಟಕದ ಲಾಲ್ಬಹದ್ದೂರ್ ಜಲಾಶಯದಲ್ಲಿಯೂ ನೀರು ನಿಧಾನವಾಗಿ ಸಂಗ್ರಹವಾಗುತ್ತಿದೆ. ಮಳೆ ಕೊರತೆಯಿಂದ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆದಿರುವ ಮೆಕ್ಕೆಜೋಳ ಬೆಳೆ ಒಣಗುತ್ತಿದೆ.
ಭಾರತೀಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇವುಗಳಲ್ಲಿ ಹಿಮಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಉತ್ತರಾಖಂಡದ ಹೆಸರುಗಳೂ ಸೇರಿವೆ. ಸದ್ಯ, ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ ಉತ್ತರಾಖಂಡದಲ್ಲಿ ಸಂಕಷ್ಟದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಅದೇ ಸಮಯದಲ್ಲಿ, ಹವಾಮಾನ ಇಲಾಖೆ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಪ್ರಸ್ತುತ, ಭಾರತೀಯ ಹವಾಮಾನ ಇಲಾಖೆ ಉತ್ತರಾಖಂಡದಲ್ಲಿ ಮಳೆಗಾಗಿ ರೆಡ್ ಅಲರ್ಟ್ ಘೋಷಿಸಿದೆ ಮತ್ತು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಆರು ಜಿಲ್ಲೆಗಳಲ್ಲಿ ಸಿಡಿಲು ಮುನ್ಸೂಚನೆ ನೀಡಿದೆ.
(With inputs from agencies)
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…