ನೆಲಕ್ಕುರುಳಿದ ಇಂಗ್ಲಿಷ್ ಬೋರ್ಡ್‍ಗಳು | ಕನ್ನಡ ನಾಮಫಲಕ ಬಳಕೆ ಕಡ್ಡಾಯಕ್ಕೆ ಕ ರ ವೇ ಒತ್ತಾಯ | ಇಂಗ್ಲಿಷ್, ಹಿಂದಿ ಬೋರ್ಡ್ ಹರಿದು ಆಕ್ರೋಶ |

December 27, 2023
1:48 PM

ಬೆಂಗಳೂರು(Bengaluru) ಹಾಗೂ ಇನ್ನಿತರ ಪಟ್ಟಣ(City), ಹಳ್ಳಿ(Village) ಎಲ್ಲೆ ಹೋಗಿ ವಾಣಿಜ್ಯ ಕಟ್ಟಡಗಳ(Commercial buildings) ನಾಮಫಲಕ(Board) ಮಾತ್ರ ಇಂಗ್ಲಿಷಲ್ಲಿ ಇರುತ್ತದೆ. ಓದಕ್ಕೆ ಬರುತ್ತದೋ ಇಲ್ವೋ ಅದು ಎರಡನೇ ಮಾತು. ಒಟ್ಟು ಯಾರೇ ತಮ್ಮ ಒಂದು ಉದ್ಯಮ ಆರಂಭಿಸುವಾಗ ಅದರ ಬೋರ್ಡ್‌ ಮಾತ್ರ ಅದ್ಧೂರಿಯಾಗಿ ಇಂಗ್ಲಿಷ್‌ ನಲ್ಲಿ ಹಾಕಿಸುತ್ತಾರೆ. ಕನ್ನಡ ನಾಡಿನಲ್ಲಿ ಕನ್ನಡ ಬರೆಯುವವರ ಸಂಖ್ಯೆ ಕಡಿಮೆಯಾಗಿದೆ. ಇದನ್ನು ಖಂಡಿಸುತ್ತಿರುವ ಕನ್ನಡ ಸಂಘಟನೆಗಳು ಇಂದು ನಗರದಲ್ಲಿ ಅಬ್ಬರಿಸಿವೆ. ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ (Kannada Board) ಸರ್ಕಾರದ ಸೂಚನೆ ಇದ್ದರೂ ನಿರ್ಲಕ್ಷ್ಯ ಮಾಡುತ್ತಿರುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು (Karnataka Rakshana Vedike) ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರಾಣವನ್ನೂ ಲೆಕ್ಕಿಸದೇ ಬೃಹತ್ ಜಾಹೀರಾತು ಫಲಕ ಏರಿ ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ.

ಕರವೇ ನಾರಾಯಣಗೌಡ (Karave Narayana Gowda) ಬಣದ ಕಾರ್ಯಕರ್ತರು ನಾಮಫಲಕ ಮಹಾ ಅಭಿಯಾನ ಆರಂಭಿಸಿದ್ದು, ರಾಜ್ಯದ ವಿವಿಧ ಭಾಗಗಳ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಅಂಗಡಿ ಹಾಗೂ ಮಾಲ್‍ಗಳ ನಾಮಫಲಕಗಳಲ್ಲಿ 60% ಆದ್ಯತೆ ಕೊಡಬೇಕು. ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆರವು ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಮಾಲ್ ಒಂದರ ಮುಂಭಾಗದ ಫ್ಲೈಓವರ್ ಮೇಲೆ ನಿಂತು ಮಾಲ್ ಕಡೆಗೆ ಚಪ್ಪಲಿ ತೂರಿದ್ದಾರೆ. ಮಾಲ್‍ಗಳಿಗೆ ರಕ್ಷಣೆ ಒದಗಿಸಲಾಗಿದ್ದು, 100ಕ್ಕೂ ಹೆಚ್ಚು ಪೊಲೀಸರು ಮಾಲ್ ಬಳಿ ಸುತ್ತುವರಿದಿದ್ದಾರೆ. ಕೆಲವೆಡೆ ಪ್ರತಿಭಟನಾಕಾರರು ಕನ್ನಡ ಇಲ್ಲದ ನಾಮಫಲಕಗಳಿಗೆ ಮಸಿ ಬಳಿದಿದ್ದಾರೆ. ಅಲ್ಲದೇ ನಾಮಫಲಕಗಳನ್ನು ಒಡೆದು ಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದಕ್ಕೂ ಕಾರಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ರುಚಿನೂ ತೋರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಪಿ ಲಕ್ಷ್ಮಿಪ್ರಸಾದ್, ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯದಂತೆ 500 ಪೊಲೀಸರನ್ನು ನಿಯೋಜಿಸಲಾಗಿದೆ. 10 ಬಿಎಂಟಿಸಿ ಬಸ್‍ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ನ್ಯಾಯಾಲಯದ ಆದೇಶ ಇರುವುದರಿಂದ ರ‍್ಯಾಲಿಗೆ ಅವಕಾಶ ಕೊಡುವುದಿಲ್ಲ. ಇದನ್ನೂ ಮೀರಿ ರಾಲಿಗೆ ಮುಂದಾದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

The number of Kannada writers in Kannada Nadi is less. Kannada organizations condemning this have shouted in the city today. Activists of Karnataka Rakshana Vedike staged a protest against those who are ignoring the government’s instructions to have 60% Kannada on the nameplates of commercial shops (Kannada Board). At this time, he raised a huge billboard and tore down the board in English without risking his life. – ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror