ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

May 27, 2026
8:15 PM
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ.

ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಲಭ್ಯವಾಗಿದೆ. ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮೇ 30ರಂದು ಆಯೋಜಿಸಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂದರ್ಶನ ನಡೆಯಲಿದೆ.

ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಬಯೋಡೇಟಾ ಸಹಿತ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅಭ್ಯರ್ಥಿಗಳಿಗೆ ಮಲಯಾಳಂ, ಹಿಂದಿ, ಇಂಗ್ಲಿಷ್ ಅಥವಾ ತಮಿಳು ಭಾಷೆಗಳ ತಿಳುವಳಿಕೆ ಇರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

VRN Infotech company will conduct a direct interview in Mangaluru on May 30 for Customer Support Executive and Telecaller posts. Graduates with knowledge of Malayalam, Hindi, English, or Tamil can attend with biodata.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?
August 17, 2026
9:00 PM
by: ದ ರೂರಲ್ ಮಿರರ್.ಕಾಂ
ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು
August 17, 2026
8:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror