ಸೈಬ‌ರ್ ಭದ್ರತಾ ನೀತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು | ಡಾ. ಶಾಲಿನಿ ರಜನೀಶ್

August 20, 2024
6:47 PM

ರಾಜ್ಯದಲ್ಲಿ ಮಕ್ಕಳ(Children) ವಿರುದ್ದ ನಡೆಯುತ್ತಿರುವ ಸೈಬರ್ ಅಪರಾಧ ಪ್ರಕರಣಗಳನ್ನು(Cyber criminal case) ಗಣನೀಯವಾಗಿ ನಿಯಂತ್ರಿಸಲು ಹಾಗೂ ಹಣಕಾಸು ವಂಚನೆ(Financial fraud)ಮತ್ತು ಸೈಬರ್ ಚಟುವಟಿಕೆಗಳಿಗೆ(Cyber Activity) ಭದ್ರತೆ ಒದಗಿಸಲು ಕರ್ನಾಟಕ ಸೈಬರ್ ಭದ್ರತಾ ನೀತಿಯನ್ನು ಇನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಹಾಗೂ ಈ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಮತ್ತು ಯುವಜನರಲ್ಲಿ ಅರಿವು ಮೂಡಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್(Dr Shalini Rajanish) ಅವರು ತಿಳಿಸಿದರು. ವಿಧಾನಸೌಧದಲ್ಲಿ ಇಂದು ಸೈಬರ್ ಅಪಾರಾಧ ನಿಯಂತ್ರಣ ಮತ್ತು ಸೈಬರ್ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

18 ವರ್ಷದ ಒಳಗಿನ ಮಕ್ಕಳ ರಕ್ಷಣೆ, ತಂತ್ರಜ್ಞಾನ ಮತ್ತು ಜಾಲತಾಣಗಳಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ಪರಿಣಾಮಗಳು, ಅಹಿತಕರ ಚಟುವಟಿಕೆಗಳಲ್ಲಿ ಕಾನೂನಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಮಕ್ಕಳು ತಮಗೆ ಅರಿಯದೆ ಭಾಗಿಯಾಗುತ್ತಿರುವುದನ್ನು ನಿಯಂತ್ರಿಸುವುದು ಅತ್ಯಗತ್ಯವಾಗಿದೆ. ಎನ್.ಸಿ.ಆರ್.ಬಿ ಮತ್ತು ಎಸ್.ಸಿ.ಆರ್.ಬಿ ವರದಿಗಳಲ್ಲಿ ಮಕ್ಕಳ ವಿರುದ್ದ ನಡೆಯುತ್ತಿರುವ ಸೈಬರ್ ಅಪಾರಾಧಗಳ ಪ್ರಮಾಣವನ್ನು ಅವಲೋಕಿಸಿ ನಿಯಂತ್ರಿಸುವ ಕಾರ್ಯಗಳು ನಿರಂತರವಾಗಿ ಹಾಗೂ ಪರಿಣಮಕಾರಿಯಾಗಿ ಮುಂದುವರೆಯಬೇಕು.

ಕರ್ನಾಟಕ ಸೈಬರ್ ಭದ್ರತಾ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಿರುವ ನೆರವು ಹಾಗೂ ಮಾನವ ಸಂಪನ್ಮೂಲ ಒದಗಿಸಲು ಸರ್ಕಾರ ಸಿದ್ದವಿದೆ. ಗೂಗಲ್, ಮೆಟಾ, ಫೇಸ್‍ಬುಕ್, ಮೈಕ್ರೋಸಾಫ್ಟ್, ಯುಟ್ಯೂಬ್ ಮತ್ತಿತರ ಕಂಪನಿಗಳ ಜೊತೆ ಸಮನ್ವಯ ಸಾಧಿಸಿ ಮಕ್ಕಳಿಗೆ ಸಂಬಂಧಿಸಿದ ಸಿ.ಎಸ್.ಎ.ಎಂ ಸಾಮಾಗ್ರಿಗಳನ್ನು ಗುರುತಿಸಿ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗುವುದು. ಸೈಬರ್ ವಂಚನೆಗೆ ಒಳಗಾದ ಮಕ್ಕಳಿಗೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಸಹಯೋಗದಲ್ಲಿ ಪುನರ್‍ವಸತಿಗೆ ಕ್ರಮ ವಹಿಸಬೇಕು. ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಪಾಲಕರು ನಿರ್ಲಕ್ಷ್ಯ ತೋರಬಾರದು. ಸೈಬರ್ ಅಪರಾಧ ಪತ್ತೆ ಘಟಕಗಳು ಹಾಗೂ ಬ್ಯಾಂಕಿಂಗ್ ವಲಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಹಣಕಾಸು ವಂಚನೆಗಳನ್ನು ತ್ವರಿತವಾಗಿ ಪತ್ತೆ ಮಾಡಿ ತಪ್ಪಿತಸ್ಥರನ್ನು ಶಿಕ್ಷಿಸುವ ಕಾರ್ಯಗಳಾಬೇಕು. ಶಾಲಾ ಹಂತದಲ್ಲಿ ಮಕ್ಕಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಡಿಜಿಟಲ್ ಭದ್ರತೆ ಕುರಿತು ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳು ಸೂಚಿಸಿದರು.

ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯು ರಾಷ್ಟ್ರೀಯ ಸೇವಾ ಯೋಜನೆ, ಸಿ.ಐ.ಡಿ ಹಾಗೂ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ “ಸೈಬರ್ ಕ್ರೈಮ್ ಸೇಫ್ ಕ್ಯಾಂಪಸ್” ಹೆಸರಿನಡಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಶಾಲಾ ಹಂತಕ್ಕೂ ಈ ಮಾದರಿಯ ಕಾರ್ಯಕ್ರಮಗಳನ್ನು ವಿಸ್ತರಿಸುವ ಅಗತ್ಯವಿದೆ ಎಂದರು. ಸೈಬರ್ ಅಪರಾಧ ನಡೆದ ಮರು ಗಳಿಗೆಯಲ್ಲಿಯೇ ಅದನ್ನು ಪತ್ತೆ ಮಾಡುವ ಕಾರ್ಯ ಚುರುಕುಗೊಳ್ಳಬೇಕು ಇದಕ್ಕಾಗಿ ಪ್ರಯೋಗಾಲಯಗಳ ಸಾಮಥ್ರ್ಯ ಹೆಚ್ಚಿಸಲು ಕ್ರಮ ವಹಿಸುವುದಾಗಿ ಅವರು ತಿಳಿಸಿದರು.

ಸಭೆಯಲ್ಲಿ ಗೃಹ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್. ರವಿ, ಅಪರಾಧ ವಿಭಾಗದ ಎ.ಡಿ.ಜಿ.ಪಿ ಹರಿಶೇಖರನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್, ಸಿ.ಐ.ಡಿ ಡಿ.ಜಿ.ಪಿ ಅಬ್ದುಲ್ಲಾ ಸಲೀಂ, ಸೈಬರ್ ಆಂತರಿಕಾ ಭದ್ರತಾ ವಿಭಾಗದ ಡಿ.ಜಿ.ಪಿ ಪ್ರಣಬ್ ಮೊಹಾಂತಿ, ನಾರ್ಕೋಟಿಕ್ಸ್ ವಿಭಾಗದ ಪೊಲೀಸ್ ಅಧೀಕ್ಷಕಿ ಸವಿತಾ, ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |
April 4, 2025
4:45 PM
by: The Rural Mirror ಸುದ್ದಿಜಾಲ
ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ
April 4, 2025
2:24 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |
April 4, 2025
1:10 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ
April 4, 2025
8:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror

Join Our Group