ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕ ಕರಾವಳಿ ಭಾಗದಲ್ಲಿ ಮೇ 14 ರಿಂದ 17 ರವರೆಗೆ ಮೂರು ದಿನಗಳ ಅವಧಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುತ್ತದೆ.
ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳುವುದು, ಸಾರ್ವಜನಿಕರು ಮತ್ತು ಮೀನುಗಾರರು ಸದಿ, ಸಮುದ್ರಕ್ಕೆ ಇಳಿಯದಂತೆ ಎಚ್ಚರದಿಂದ ಇರಲು ಹಾಗೂ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುವುದು ಸೂಕ್ತವಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳ ತುರ್ತುಸೇವೆಗೆ ಕಂಟ್ರೋಲ್ ರೂಂ ನಂಬರ್: 1077 ಹಾಗೂ 9483908000 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…