01.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿರುವ ಪೆಂಗಾಲ್ ಚಂಡಮಾರುತವು ಡಿಸೆಂಬರ್ 1 ರಂದು ಪಾಂಡಿಚೇರಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 2 ಹಾಗೂ 3 ರಂದು ತಮಿಳುನಾಡು – ಕರ್ನಾಟಕ ಗಡಿ ಭಾಗಗಳಲ್ಲಿ ಸಾಗಿ ಕೇರಳದ ಕೋಜಿಕ್ಕೊಡು ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.
ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದರೆ ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಚಂಡಮಾರುತವು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿದ ನಂತರವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…