Advertisement
ಸುದ್ದಿಗಳು

ಹವಾಮಾನ ವರದಿ | 30-11-2024 | ರಾಜ್ಯದಲ್ಲಿ ಮೋಡದ ವಾತಾವರಣ | ಇಂದಿನಿಂದ ಚಳಿಯ ವಾತಾವರಣ ಕಡಿಮೆ |

Share

01.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. 

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿರುವ ಪೆಂಗಾಲ್ ಚಂಡಮಾರುತವು ಡಿಸೆಂಬರ್ 1 ರಂದು ಪಾಂಡಿಚೇರಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 2 ಹಾಗೂ 3 ರಂದು ತಮಿಳುನಾಡು – ಕರ್ನಾಟಕ ಗಡಿ ಭಾಗಗಳಲ್ಲಿ ಸಾಗಿ ಕೇರಳದ ಕೋಜಿಕ್ಕೊಡು ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.

ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದರೆ ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಚಂಡಮಾರುತವು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿದ ನಂತರವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

6 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago