Advertisement
ಸುದ್ದಿಗಳು

ಹವಾಮಾನ ವರದಿ | 27-10-2025 | ಸದ್ಯ ಅ.28 ರಿಂದ ಮಳೆ ಕಡಿಮೆ – ಮುಂದೇನು…?

Share

28.10.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಅಕ್ಟೊಬರ್ 28ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಒಳನಾಡು ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಅಕ್ಟೊಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ಉತ್ತರ ಒಳನಾಡು : ಬೀದರ್ ಜಿಲ್ಲೆಯ ಒಂದೆರಡು ಭಾಗಗಳಲ್ಲಿ, ಬೆಳಗಾವಿ, ಧಾರವಾಡ, ಕಲಬುರ್ಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಅಕ್ಟೊಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗಬಹುದು.

ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಅಕ್ಟೊಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

14 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

15 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

1 day ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

1 day ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

1 day ago