Advertisement
ವೆದರ್ ಮಿರರ್

ಹವಾಮಾನ ವರದಿ | 01-12-2024 | ಇಂದು ರಾಜ್ಯದಾದ್ಯಂತ ಮೋಡದ ವಾತಾವರಣ | ಡಿ.2 ರಿಂದ ಕೆಲವು ಕಡೆ ಮಳೆ | ದುರ್ಬಲಗೊಳ್ಳುತ್ತಿರುವ ಫೆಂಗಲ್‌ ಚಂಡಮಾರುತ |

Share

02.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದ ದಕ್ಷಿಣ ಭಾಗದಲ್ಲಿ ಮೋಡ ಜಾಸ್ತಿ ಇರಲಿದೆ.

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಹಗುರ ಮೋಡ ಹಾಗೂ ಒಣಹವೆ ಮುಂದುವರಿಯಲಿದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 2ರಿಂದ 4ನೇ ತಾರೀಕಿನ ತನಕ ಮಳೆಯಾಗುವ ಲಕ್ಷಣಗಳಿವೆ. ಡಿಸೆಂಬರ್ 2ರಂದು ಮಳೆಯ ಪ್ರಮಾಣ ಜಾಸ್ತಿ ಇರಬಹುದು.

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಡಿಸೆಂಬರ್ 2ರಂದು ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾದರೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಡಿಸೆಂಬರ್ 4ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಉತ್ತರ ಒಳನಾಡಿನಲ್ಲಿ ಡಿಸೆಂಬರ್ 2 ಹಾಗೂ ಡಿಸೆಂಬರ್ 4ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡು ಭಾಗಗಳಲ್ಲಿ ಡಿಸೆಂಬರ್ 2 ಹಾಗೂ 3ರಂದು ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಪಾಂಡಿಚೇರಿ ಕರಾವಳಿಯಲ್ಲಿ ಬೀಡುಬಿಟ್ಟಿರುವ ಫೆಂಗಲ್ ಚಂಡಮಾರುತವು ದಿನ ಕಳೆದಂತೆ ದುರ್ಬಲಗೊಳ್ಳುತ್ತಿದ್ದು, ಡಿಸೆಂಬರ್ 2 ಹಾಗೂ 3ರಂದು ರಾಜ್ಯದ ಚಾಮರಾಜನಗರ ಮೂಲಕ ಸಾಗಿ ಕೇರಳದ ಕೋಜಿಕ್ಕೊಡು ಭಾಗದಲ್ಲಿ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದಲ್ಲಿ ಚಳಿ ಪ್ರಮಾಣವು ಕಡಿಮೆಯಾಗಿದ್ದು, ಫೆಂಗಲ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯನ್ನು ಸೆಳೆಯುತ್ತಿರುವುದರಿಂದ ಚಳಿಯ ಪ್ರಮಾಣ ಕಡಿಮೆಯಾಗಿರುವ ಸಾಧ್ಯತೆಗಳಿವೆ. ಡಿಸೆಂಬರ್ 3ರ ನಂತರ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುಂದುವರಿಯುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

7 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

15 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

19 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

3 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

4 days ago