ತೀವ್ರತೆ ಪಡೆದುಕೊಂಡ ಅಸಾನಿ ಚಂಡಮಾರುತ | ರಾಜ್ಯದಲ್ಲೂ ಮಳೆ ಸಾಧ್ಯತೆ | ಆಂಧ್ರಪ್ರದೇಶ- ಒಡಿಶಾದಲ್ಲಿ ಹೆಚ್ಚು ಮಳೆ ನಿರೀಕ್ಷೆ |

Advertisement
Advertisement
Advertisement

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತ ಆಗಿ ಪರಿವರ್ತನೆ  ಆಗಲಿದ್ದು, ಮುಂದಿನ 24 ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಭಾನುವಾರ ತಿಳಿಸಿದೆ.

Advertisement

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೇ 8 ರ ವೇಳೆಗೆ ಚಂಡಮಾರುತವಾಗಿ ನಂತರ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆಯು ಶನಿವಾರ ಮುನ್ನೆಚ್ಚರಿಕೆ ನೀಡಿತ್ತು. ಭಾನುವಾರ ಇನ್ನಷ್ಟು ಬಲಗೊಂಡ ಚಂಡಮಾರುತವು ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ಒಡಿಶಾದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಗಳಿವೆ. ಚಂಡಮಾರುತದ ವೇಗ ಹೆಚ್ಚಾಗಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿದಡೆಯೂ ಮಳೆಯಾಗುವ ಸಾಧ್ಯತೆ ಇದೆ. ಈ ಚಂಡಮಾರುತಕ್ಕೆ ಅಸಾನಿ ಎಂದು ಹೆಸರಿಡಲಾಗಿದೆ.

Advertisement

ನಿರೀಕ್ಷಿತ ಚಂಡಮಾರುತಕ್ಕೆ ಅಸಾನಿ ಎಂದು ಹೆಸರಿಡಲಾಗಿದೆ. ಶ್ರೀಲಂಕಾ ಚಂಡಮಾರುತಕ್ಕೆ ಹೆಸರಿಟ್ಟಿದ್ದು, ಸಿಂಹಳಿ ಭಾಷೆಯಲ್ಲಿ ಅಸಾನಿ ಎಂದ್ರೆ ಕ್ರೋಧ ಎಂದರ್ಥ.  ಮೇ 9 ಮತ್ತು 10 ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ. ಗಾಳಿಯ ವೇಳೆ ಗಂಟೆಗೆ 80 ರಿಂದ 90 ಕಿಲೋ ಮೀಟರ್ ಇರಲಿದೆ ಎಂದು ಅಂದಾಜಿಸಲಾಗಿದೆ.  ಸದ್ಯ ಚಂಡಮಾರುತವು ವಿಶಾಖಪಟ್ಟಣಂನ ಆಗ್ನೇಯಕ್ಕೆ ಸುಮಾರು 900 ಕಿಮೀ ದೂರದಲ್ಲಿದೆ.

ಚಂಡಮಾರುತದಿಂದ ಯಾವುದೇ ತುರ್ತು ಪರಿಸ್ಥಿತಿ ಉಂಟಾದರೆ ಒಡಿಶಾದ 18 ಜಿಲ್ಲೆಗಳಲ್ಲಿ 7.5 ಲಕ್ಷ ಜನರನ್ನು ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಒಡಿಶಾ ವಿಶೇಷ ಪರಿಹಾರ ಆಯುಕ್ತ ಪ್ರದೀಪ್ ಜೆನಾ ಹೇಳಿದ್ದಾರೆ.

Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ತೀವ್ರತೆ ಪಡೆದುಕೊಂಡ ಅಸಾನಿ ಚಂಡಮಾರುತ | ರಾಜ್ಯದಲ್ಲೂ ಮಳೆ ಸಾಧ್ಯತೆ | ಆಂಧ್ರಪ್ರದೇಶ- ಒಡಿಶಾದಲ್ಲಿ ಹೆಚ್ಚು ಮಳೆ ನಿರೀಕ್ಷೆ |"

Leave a comment

Your email address will not be published.


*