ಈಶಾನ್ಯ ಅರಬ್ಬಿ ಸಮುದ್ರದ ಮೇಲೆ ಅಪ್ಪಳಿಸುತ್ತಿದ್ದ ‘ಅಸ್ನಾ’ ಚಂಡಮಾರುತವು ಪಶ್ಚಿಮಾಭಿಮುಖವಾಗಿ ಚಲಿಸಿದೆ ಮತ್ತು ಈಗ ಗುಜರಾತ್‌ನ ನಲಿಯಾದಿಂದ ಪಶ್ಚಿಮಕ್ಕೆ 310 ಕಿಮೀ ದೂರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಇದು ಭಾರತದ ಕರಾವಳಿಯಿಂದ ದೂರ ಚಲಿಸುವ ಸಾಧ್ಯತೆಯಿದೆ. ಹೀಗಾಗಿ ಭಾರೀ ಮಳೆಯ ಸಾಧ್ಯತೆ ಕಡಿಮೆಯಾಗಿದೆ ಎಂದು ತಿಳಿಸಿದೆ. ಈ ನಡುವೆ ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆ ಗಣನೀಯವಾಗಿ ಕಡಿಮೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಗುಜರಾತ್ ನಲ್ಲಿ ಭಾರೀ ಮಳೆಯಾಗಿತ್ತು. ಇದರ ಪರಿಣಾಮವಾಗಿ ಗುಜರಾತ್‌ನಾದ್ಯಂತ 30 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಭಾರೀ ಮಳೆಯಿಂದಾಗಿ ಮೂಲಸೌಕರ್ಯಗಳಿಗೆ ಹಾನಿಯಾಗಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel