#CycloneBiparjoy | ಬಿಪರ್ ಜೋಯ್‌ ಚಂಡಮಾರುತ | ಗುಜರಾತ್‌ ಕರಾವಳಿಯಲ್ಲಿ ಅಪ್ಪಳಿಸಿದ ರಣಭೀಕರ ಚಂಡಮಾರುತ | ಭಾರೀ ಮಳೆ ಹಾಗೂ ಗಾಳಿ |

June 15, 2023
9:22 PM

ಬಿಪರ್‌ ಜೋಯ್ ಚಂಡಮಾರುತವು  ಗುಜರಾತ್ ಕರಾವಳಿ ಸಮೀಪಿಸಿದ್ದು, ಭಾರೀ ಮಳೆ ಹಾಗೂ ಗಾಳಿಯ ಜೊತೆಗೆ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಅಪ್ಪಳಿಸಲು ಆರಂಭವಾಗಿದೆ. ಸಂಜೆ 4-8 ಗಂಟೆಯ ನಡುವೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.ಅತ್ಯಂತ ತೀವ್ರವಾದ ಚಂಡಮಾರುತವು ಗುಜರಾತ್‌ನ ಜಖೌ ಬಂದರಿನಿಂದ 70 ಕಿಲೋಮೀಟರ್ ದೂರದಲ್ಲಿದೆ. ಸೌರಾಷ್ಟ್ರ ಮತ್ತು ಕಛ್ ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ.

Advertisement
Advertisement

ಚಂಡಮಾರುತವು ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯನ್ನು ಉಂಟು ಮಾಡುತ್ತಿದೆ. ಚಂಡಮಾರುತದ ಪ್ರಭಾವ ಹೊಂದಿರುವ ಗುಜರಾತ್ ಪ್ರದೇಶದ 94,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ಪಾಕಿಸ್ತಾನವು ಸಿಂಧ್‌ನಿಂದ ಇದುವರೆಗೆ ಸುಮಾರು 77,000 ಜನರನ್ನು ಸ್ಥಳಾಂತರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.

“ಅತ್ಯಂತ ತೀವ್ರವಾದ ಚಂಡಮಾರುತ” ಇದಾಗಿದ್ದು, ಗರಿಷ್ಠ ಗಾಳಿಯ ವೇಗ ಗಂಟೆಗೆ 150 ಕಿಲೋಮೀಟರ್ ವರೆಗೆ ತಲುಪುತ್ತದೆ. ಗುಜರಾತ್ ಆಡಳಿತವು ಕಚ್ ಜಿಲ್ಲೆಯ ಕಡಲತೀರದಿಂದ  10 ಕಿಮೀ ನಡುವಿನ ಸುಮಾರು 120 ಹಳ್ಳಿಗಳಿಂದ ಜನರನ್ನು ಸ್ಥಳಾಂತರಿಸಿದೆ. ಸೇನೆ, ನೌಕಾಪಡೆ ಮತ್ತು ಐಎಎಫ್ ತಂಡಗಳು ಪರಿಹಾರ ಕಾರ್ಯಾಚರಣೆಗೆ ಸನ್ನದ್ಧವಾಗಿವೆ. ‌

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror