ಬಿಪರ್ ಜೋಯ್ ಚಂಡಮಾರುತವು ಗುಜರಾತ್ ಕರಾವಳಿ ಸಮೀಪಿಸಿದ್ದು, ಭಾರೀ ಮಳೆ ಹಾಗೂ ಗಾಳಿಯ ಜೊತೆಗೆ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಅಪ್ಪಳಿಸಲು ಆರಂಭವಾಗಿದೆ. ಸಂಜೆ 4-8 ಗಂಟೆಯ ನಡುವೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.ಅತ್ಯಂತ ತೀವ್ರವಾದ ಚಂಡಮಾರುತವು ಗುಜರಾತ್‌ನ ಜಖೌ ಬಂದರಿನಿಂದ 70 ಕಿಲೋಮೀಟರ್ ದೂರದಲ್ಲಿದೆ. ಸೌರಾಷ್ಟ್ರ ಮತ್ತು ಕಛ್ ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ.
ಚಂಡಮಾರುತವು ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯನ್ನು ಉಂಟು ಮಾಡುತ್ತಿದೆ. ಚಂಡಮಾರುತದ ಪ್ರಭಾವ ಹೊಂದಿರುವ ಗುಜರಾತ್ ಪ್ರದೇಶದ 94,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ಪಾಕಿಸ್ತಾನವು ಸಿಂಧ್‌ನಿಂದ ಇದುವರೆಗೆ ಸುಮಾರು 77,000 ಜನರನ್ನು ಸ್ಥಳಾಂತರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.
“ಅತ್ಯಂತ ತೀವ್ರವಾದ ಚಂಡಮಾರುತ” ಇದಾಗಿದ್ದು, ಗರಿಷ್ಠ ಗಾಳಿಯ ವೇಗ ಗಂಟೆಗೆ 150 ಕಿಲೋಮೀಟರ್ ವರೆಗೆ ತಲುಪುತ್ತದೆ. ಗುಜರಾತ್ ಆಡಳಿತವು ಕಚ್ ಜಿಲ್ಲೆಯ ಕಡಲತೀರದಿಂದ 10 ಕಿಮೀ ನಡುವಿನ ಸುಮಾರು 120 ಹಳ್ಳಿಗಳಿಂದ ಜನರನ್ನು ಸ್ಥಳಾಂತರಿಸಿದೆ. ಸೇನೆ, ನೌಕಾಪಡೆ ಮತ್ತು ಐಎಎಫ್ ತಂಡಗಳು ಪರಿಹಾರ ಕಾರ್ಯಾಚರಣೆಗೆ ಸನ್ನದ್ಧವಾಗಿವೆ.
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…
ಈಗಿನ ಹೆತ್ತವರ ಮಾತೇ ಹಾಗೆ. ನಾವು ಕಷ್ಟಪಟ್ಟಿದ್ದೇವೆ. ನಮ್ಮ ಮಕ್ಕಳು ಕಷ್ಟಪಡುವುದು ಬೇಡ.…