ಬಿಪೊರ್ ಜಾಯ್ ಚಂಡಮಾರುತವು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದೆ. ಜೂ.8 ರಂದು ಮುಂಬೈ, ಗೋವಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಸದ್ಯ ಗೋವಾದ ಪಶ್ಚಿಮ-ನೈಋತ್ಯಕ್ಕೆ 860 ಕಿಮೀ, ಮುಂಬೈನಿಂದ 910 ಕಿಮೀ ನೈಋತ್ಯಕ್ಕೆ ಚಂಡಮಾರುತ ಪ್ರಭಾವ ಇದೆ. ಇದು ಮತ್ತಷ್ಟು ತೀವ್ರಗೊಳ್ಳುತ್ತಿದ್ದು ಮತ್ತು ಉತ್ತರ-ವಾಯುವ್ಯಕ್ಕೆ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಂಡಮಾರುತದ ಪ್ರಭಾವವು ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಮುಂಗಾರು ಹಿನ್ನಡೆಯಾಗಲಿದೆ. ಜೂನ್ 10 ರವರೆಗೆ ಕರ್ನಾಟಕ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಹೆಚ್ಚಿನ ವೇಗದ ಗಾಳಿಯು ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಗಾಳಿಯು ಮಧ್ಯ ಅರಬೀ ಸಮುದ್ರದ ಮೇಲೆ ಗಂಟೆಗೆ 170 ಕಿಮೀ ವೇಗದಲ್ಲಿ ಇರಬಹುದು. ಕರಾವಳಿಯಲ್ಲಿ ಜೂನ್ 10 ರವರೆಗೆ ಸಮುದ್ರದ ಪರಿಸ್ಥಿತಿಗಳು ಕಠಿಣವಾಗಿರಬಹುದು.
ಚಂಡಮಾರುತದ ಕಾರಣದಿಂದ ಮಾನ್ಸೂನ್ ಪ್ರಾರಂಭದಲ್ಲಿ ವಿಳಂಬಕ್ಕೆ ಕಾರಣವಾಗಬಹುದು ಎಂದು ಖಾಸಗಿ ಮುನ್ಸೂಚಕ ಸ್ಕೈಮೆಟ್ ಹೇಳಿದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…