ದೇಶದಲ್ಲಿ ಬಿಪರ್ಜಾಯ್ ಚಂಡಮಾರುತ ಅಬ್ಬರ ಜೋರಾಗಿದ್ದು, ಉತ್ತರಭಾರತದ ಹಲವೆಡೆ ಆತಂಕ ಸೃಷ್ಟಿಯಾಗಿದೆ. ಮತ್ತೊಂದೆಡೆ ಚಂಡಮಾರುತದ ಕಾರಣಕ್ಕೆ 67 ರೈಲುಗಳ ಸಂಚಾರ ರದ್ದುಗೊಂಡಿದೆ.
ಗುಜರಾತ್ನ ಸೌರಾಷ್ಟ್ರ ಮತ್ತು ಕಛ್ ಭಾಗದಲ್ಲಿ ಈಗಾಗಲೇ ಚಂಡಮಾರುತ ವ್ಯಾಪಿಸುವ ಕುರಿತು ಹವಾಮಾನ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಜೂ. 15ರ ಸಂಜೆ ಸುಮಾರಿಗೆ ಗುಜರಾತ್ನ ಜಖಾವು ಬಂದರು ಬಳಿ ಅತಿ ತೀವ್ರ ಚಂಡಮಾರುತ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಜರಾತ್ಗೆ ಜೂ. 15ರಂದು ಅಪ್ಪಳಿಸಲಿರುವ ಬಿಪರ್ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲೂ ಬಿಪರ್ಜಾಯ್ ಚಂಡಮಾರುತದ ಅಬ್ಬರ ಜೋರಾಗಿರಲಿದ್ದು, ಜೂ. 13ರಿಂದ 15ರ ವರೆಗೆ ಜನರು ಕಡಲತೀರಕ್ಕೆ ಹೋಗಬಾರದು ಎಂದು ಪಾಲ್ಘಾರ್ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯಕ್ಕೆ ಮಾನ್ಸೂನ್ ಎಂಟ್ರಿ ಆಗಿರುವ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಭಾರೀ ಪ್ರಮಾಣದ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…