ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವರ್ಚ್ಯುವಲ್ ಮೂಲಕ ಅಧಿಕಾರಿಗಳ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ನಿರ್ದೇಶನ ನೀಡಿದ್ದಾರೆ. ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ ನಾಲ್ಕೈದು ದಿನಗಳ ಕಾಲ ಮಳೆ ಬರುವ ಮುನ್ಸೂಚನೆಯಿದ್ದು, ಗಾಳಿ ಹೆಚ್ಚಾಗಿ ಬೀಸುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮರ ಕಟಾವು ಮಾಡುವ ಎಲ್ಲಾ 28 ತಂಡಗಳನ್ನು ಸನ್ನದ್ಧರಾಗಿರಬೇಕು ಎಂದು ತಿಳಿಸಿದ್ದಾರೆ. ಆಯಾ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…