Advertisement
MIRROR FOCUS

ಫೆಂಗಲ್ ಚಂಡಮಾರುತ | ರಾಜ್ಯದ ಎಲ್ಲೆಲ್ಲಿ ಹೇಗಿದೆ ಮಳೆ ? | ಕೋಲಾರದಲ್ಲಿ ಶೀತ ಗಾಳಿ |

Share

ಫೆಂಗಲ್ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಡಿ.3 ರಂದು ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಬೋಟ್‌ಗಳು ಕೂಡಲೇ ಹಿಂತಿರುಗುವಂತೆ ಸೂಚಿಸಲಾಗಿದೆ. ಪ್ರವಾಸಿಗರು ಬೀಚ್‌ಗಳಿಗೆ ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ  ತಕ್ಷಣ ಪಂಚಾಯತ್ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

Advertisement
Advertisement
Advertisement

ಕೊಡಗು ಜಿಲ್ಲೆಯಾದ್ಯಂತ  ಮಳೆಯಾಗುತ್ತಿದೆ. ಡಿ.3 ರಂದು ರೆಡ್ ಅಲರ್ಟ್  ಘೋಷಿಸಲಾಗಿದ್ದು, ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Advertisement

ಫೆಂಗಲ್ ಚಂಡಮಾರುತದಿಂದ ಕೋಲಾರ ಜಿಲ್ಲೆಯಲ್ಲಿ ಮಳೆ ಮತ್ತು ಶೀತ ಗಾಳಿಯಿಂದ ಜನರು ತತ್ತರಿಸಿದ್ದಾರೆ. 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ರಾಗಿ ಹೊಲದಲ್ಲೇ ನೆಲಕಚ್ಚುವ ಭೀತಿ ರೈತರಿಗೆ ಕಾಡುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ  ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಹಾಗೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳಬಾರದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಉಡುಪಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗಲಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ನದಿ ಪಾತ್ರ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಕಳೆದ ಎರಡು ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಂಚಾರ ದಟ್ಟಣೆಯಿಂದ ಪರದಾಡುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಬಿಎಂಪಿ ಅಧಿಕಾರಿಗಳು ಪರಿಹಾರ ಕಾರ್ಯಾಚರಣೆಗೆ ಸನ್ನದ್ಧರಾಗುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್

ಹವಾಮಾನ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯವು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರವಾದ ಪರಿಣಾಮ…

12 mins ago

ಮುದ್ದೇಬಿಹಾಳ ಪಟ್ಟಣದಲ್ಲಿ ರೈತರು ಪ್ರತಿಭಟನೆ | ತೊಗರಿ ಬೆಳೆಗೆ ಪರಿಹಾರ ನೀಡಲು ಒತ್ತಾಯ

ವಿಜಯಪುರ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ ಬೆಳೆ ಉತ್ತಮ ಫಸಲು…

36 mins ago

ರಾಜ್ಯದ ವಿವಿಧೆಡೆ ತೊಗರಿಬೆಳೆಗೆ ರೋಗಬಾಧೆ | ಪರಿಹಾರ ನೀಡುವಂತೆ ಬಿಜೆಪಿ ಆಗ್ರಹ

ರಾಜ್ಯದ ವಿವಿಧೆಡೆ ತೊಗರಿಬೆಳೆ ರೋಗಕ್ಕೆ ಸಿಲುಕಿದ್ದು, 2 ರಿಂದ 3 ಲಕ್ಷ ಎಕರೆ…

50 mins ago

ರೈತರಿಂದ ನೇರವಾಗಿ ರಾಗಿ, ಜೋಳ, ಭತ್ತ ಖರೀದಿಸಿ ಪಡಿತರ ವಿತರಣೆ ನಡೆಸಲು ಆಹಾರ ಇಲಾಖೆ ತೀರ್ಮಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ…

55 mins ago

ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿಯವರಿಗೆ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರದಾನ

ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ…

1 hour ago