ಹವಾಮಾನ ವರದಿ | 29-11-2025 | ಚಂಡಮಾರುತ ಪ್ರಭಾವ – ರಾಜ್ಯದ ಎಲ್ಲೆಲ್ಲಿ ಮಳೆ ಇದೆ…?

November 29, 2025
1:38 PM

30.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಚಂಡಮಾರುತದ ಮಳೆಯ ಮುನ್ಸೂಚನೆ ಇದೆ. ನಂತರ ಡಿಸೆಂಬರ್ 5 ರ ತನಕ ಚಂಡಮಾರುತದ ಪ್ರಭಾವದಿಂದ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. (ಚಂಡಮಾರುತವು ಆಂದ್ರಾ ಕರಾವಳಿಯಿಂದ ಉತ್ತರ ಚಲಿಸುವ ಸಾಧ್ಯತೆಗಳಿಲ್ಲದ್ದರಿಂದ ಹಿಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿಲ್ಲ)

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 30 ರಿಂದ ಡಿಸೆಂಬರ್ 1 ರ ತನಕ ಚಂಡಮಾರುತದ ಮಳೆಯ ಮುನ್ಸೂಚನೆ ಇದ್ದು, ಡಿಸೆಂಬರ್ 5ರ ತನಕ ಅದರ ಪ್ರಭಾವದಿಂದ ಮಳೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಆಂದ್ರಾ ಗಡಿಭಾಗಗಳ ಜಿಲ್ಲೆಗಳಲ್ಲಿ ಡಿಸೆಂಬರ್ 1 ರಂದು ಚಂಡಮಾರುತದ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮಾತ್ರ ಇರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿಭಾಗಗಳಲ್ಲಿ ನಿರಂತರ ಹನಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 30ರಂದು ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಡಿಸೆಂಬರ್ 2ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ದಿತ್ವಾ ಚಂಡಮಾರುತವು ಡಿಸೆಂಬರ್ 1 ರಂದು ಆಂದ್ರಾ ಕರಾವಳಿ ತೀರದಲ್ಲಿ ದುರ್ಬಲಗೊಂಡು, ಮತ್ತೆ ತಮಿಳುನಾಡು ಕರಾವಳಿಗೆ ಸರಿದು, ಡಿಸೆಂಬರ್ 5ರ ನಂತರ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಹಿಂಗಾರು ಮಾರುತಗಳು ಸಂಪೂರ್ಣ ಹಿಂದೆ ಸರಿಯುವ ಸಾಧ್ಯತೆಗಳಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror