ಮ್ಯಾಂಡೋಸ್ ಚಂಡಮಾರುತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿ ಮುಟ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿದಿನವಿಡೀ ಮಳೆ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಗಿದೆ. ಕೋಲಾರದಲ್ಲಿ ಸುರಿದ ಭಾರೀ ಮಳೆಗೆ ಕೃಷಿ ಹಾನಿಯಾಗಿದೆ. ಕರಾವಳಿ ಪ್ರದೇಶದಲ್ಲಿ ತುಂತುರು ಮಳೆಯಾಗಿದ್ದು, ಇಲ್ಲಿನ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿದೆ. ಅಡಿಕೆ ಒಣಗಲು ಕಷ್ಟವಾಗಿದೆ. ಕರಾವಳಿಯಲ್ಲಿ ಈಗ ಅಡಿಕೆ ಕೊಯ್ಲಿನ ಸಮಯವಾಗಿದ್ದು, ಕೊಯ್ಲು ಆದ ಅಡಿಕೆ ಅಂಗಳದಲ್ಲಿ ಮಳೆಗೆ ಕೊಳೆಯುತ್ತಿದೆ.
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಚಳಿಯೂ ಕಾಡುತ್ತಿದೆ. ರಾಜ್ಯದ ವಿವಿಧ ಕಡೆಗಳಲ್ಲೂ ಇದೇ ರೀತಿಯ ವಾತಾವರಣ ಕಂಡುಬಂದಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗಿಂತಲೂ ಬಯಲು ಸೀಮೆಯ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್15ರವರೆಗೆ ಮಳೆ ಮುಂದುವರಿಯುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…
ಇತ್ತೀಚಿನ ಅಧ್ಯಯನಗಳ ಪ್ರಕಾರ, ಭಾರತವು ಜಾಗತಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಅಗ್ರ ಉತ್ಪಾದಕ ಎಂದು…
115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ…