Advertisement
ಸುದ್ದಿಗಳು

ರಾಜ್ಯಕ್ಕೂ ತಟ್ಟಿದ ಚಂಡಮಾರುತ ಎಫೆಕ್ಟ್‌ | ಕೋಲಾರದಲ್ಲಿ ಕೃಷಿಗೆ ಹಾನಿ | ಬೆಂಗಳೂರಲ್ಲಿ ದಿನವಿಡೀ ಮಳೆ | ಕರಾವಳಿಯಲ್ಲಿ ಅಡಿಕೆ ಬೆಳೆಗಾರರಿಗೆ ತಲೆಬಿಸಿ |

Share

ಮ್ಯಾಂಡೋಸ್‌ ಚಂಡಮಾರುತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿ ಮುಟ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿದಿನವಿಡೀ ಮಳೆ ಇತ್ತು.  ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಗಿದೆ. ಕೋಲಾರದಲ್ಲಿ ಸುರಿದ ಭಾರೀ ಮಳೆಗೆ ಕೃಷಿ ಹಾನಿಯಾಗಿದೆ. ಕರಾವಳಿ ಪ್ರದೇಶದಲ್ಲಿ ತುಂತುರು ಮಳೆಯಾಗಿದ್ದು, ಇಲ್ಲಿನ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿದೆ. ಅಡಿಕೆ ಒಣಗಲು ಕಷ್ಟವಾಗಿದೆ. ಕರಾವಳಿಯಲ್ಲಿ ಈಗ ಅಡಿಕೆ ಕೊಯ್ಲಿನ ಸಮಯವಾಗಿದ್ದು, ಕೊಯ್ಲು ಆದ ಅಡಿಕೆ ಅಂಗಳದಲ್ಲಿ ಮಳೆಗೆ ಕೊಳೆಯುತ್ತಿದೆ.

ಬೆಂಗಳೂರಿನಲ್ಲಿ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಚಳಿಯೂ ಕಾಡುತ್ತಿದೆ. ರಾಜ್ಯದ ವಿವಿಧ ಕಡೆಗಳಲ್ಲೂ ಇದೇ ರೀತಿಯ ವಾತಾವರಣ ಕಂಡುಬಂದಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗಿಂತಲೂ ಬಯಲು ಸೀಮೆಯ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್‌15ರವರೆಗೆ ಮಳೆ ಮುಂದುವರಿಯುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್‌ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

18 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

18 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

18 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

18 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago