ಮಿಚಾಂಗ್‌ ಚಂಡಮಾರುತದ ಅಬ್ಬರ | ಚಂಡಮಾರುತದ ಮಳೆಗೆ ಚೆನ್ನೈ ತತ್ತರ | ಭಾರೀ ಮಳೆಗೆ 3 ಜನರು ಬಲಿ |

December 4, 2023
9:41 PM
ಮಿಚಾಂಗ್‌ ಚಂಡಮಾರುತದ ಕಾರಣದಿಂದ ಚೆನ್ನೈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.

ಮಿಚಾಂಗ್ ಚಂಡಮಾರುತದ ಪ್ರಭಾವದಿಂದ  ಚೆನ್ನೈಯಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ  ಚೆನ್ನೈನ ಹೆಚ್ಚಿನ ಭಾಗವು ಮುಳುಗಿದೆ. ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಾಗುವ ಸಾಧ್ಯತೆಯಿದೆ. ಚೆನ್ನೈನಲ್ಲಿ ತಗ್ಗು ಪ್ರದೇಶಗಳಿಂದ ಭಾರೀ ಪ್ರವಾಹ ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಮಂಗಳವಾರ ಬೆಳಿಗ್ಗೆವರೆಗೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಚಂಡಮಾರುತವು ಮಧ್ಯರಾತ್ರಿಯ ಸುಮಾರಿಗೆ ನೆಲ್ಲೂರು  ನಡುವೆ ಸಾಗಿಬರುವ ನಿರೀಕ್ಷೆಯಿದೆ.

ಚೆನ್ನೈನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಬೆಳಗ್ಗೆಯಿಂದ ಮಳೆ ನಿರಂತವಾಗಿ ಸುರಿಯುತ್ತಿದೆ. ಚಂಡಮಾರುತದ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ 5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.

ಚಂಡಮಾರುತದ ಪ್ರಭಾವದಿಂದ ತಮಿಳುನಾಡು ರಾಜಧಾನಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ 33 ವಿಮಾನಗಳನ್ನು ಚೆನ್ನೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವರ್ಗಾವಣೆ ಮಾಡಲಾಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!
January 10, 2026
7:24 AM
by: ದ ರೂರಲ್ ಮಿರರ್.ಕಾಂ
ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
January 10, 2026
7:08 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror